ಮುಂಬೈ : ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ.. ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ.. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ..
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಕೆಲವೆಡೆ ನೆರೆ ಸೃಷ್ಟಿಯಾಗಿದ್ದು, ಮುಳಗಡೆಯಾಗುತ್ತಿರುವ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಕೋಲ್ಹಾಪುರ್ ಜಿಲ್ಲೆಯ ಕೆಲವಡೆ ಭಾರಿ ನೆರೆ ಸೃಷ್ಟಿಯಾಗಿದ್ದು, ಜನರ ರಕ್ಷಣಾ ಕಾರ್ಯದಲ್ಲಿ ಎನ್ ಡಿ ಆರ್ ಎಫ್ ತಂಡ ನಿರತವಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇನ್ನೂ ಭಾರೀ ಮಳೆಯಿಂದಾಗಿ ಸತಾರ ಜಿಲ್ಲೆಯಲ್ಲಿರುವ ಕೊಯ್ನಾ ನದಿಯ ಒಳ ಹರಿವು ಹೆಚ್ಚಳವಾಗಿದ್ದು, ಅಲ್ಲಿನ ಸುತ್ತ ಮುತ್ತ ಪ್ರದೇಶಗಳಲ್ಲಿ ನೆರೆ ಸೃಷ್ಟಿಯಾಗಿದೆ.
ಈ ಮಧ್ಯೆ, ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯಲ್ಲಿ ಮಳೆಯ ಕಾರಣದಿಂದ ಗುಡ್ಡ ಕುಸಿತ ಸಂಭವಿಸಿದ್ದು, ಕಳೆದ 24 ಗಂಟೆಗಳಲ್ಲಿ ಐದು ಮಂದಿ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಯ್ ಗಡ್ ಜಿಲ್ಲಾಧಿಕಾರಿ ನಿಧಿ ಚೌಧರಿ, ಮಳೆ ಹಾಗೂ ಗಡ್ಡ ಕುಸಿತದ ಕಾರಣದಿಂದಾಗಿ ಅಂದಾಜು ಈವರೆಗೆ ಐವರು ಮಂದಿ ಮೃತ ಪಟ್ಟಿದ್ದಾರೆ. ಅಪಾಯ ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಕಾರ್ಯ ನಡೆಸಲಾಗುತ್ತಿದೆ. ಎನ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
Laxmi News 24×7