Home / ಜಿಲ್ಲೆ / ಬೆಳಗಾವಿ / ಗೋಕಾಕ / ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ

Spread the love

ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಈಗಾಗಲೇ ಹಿರಣ್ಯಕೇಶಿ ನದಿಯಿಂದ ೩೭,೦೦೦ ಕ್ಯೂಸೆಕ್ಸ್, ಬಳ್ಳಾರಿ ನಾಲಾದಿಂದ ೧೩,೦೦೦ ಕ್ಯೂಸೆಕ್ಸ್ ಹಾಗೂ ಮಾರ್ಕಂಡೇಯ ನದಿಯಿಂದ ೧೭,೦೦೦ ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಬರುತ್ತಿದ್ದು, ಜೊತೆಗೆ ಹಿಡಕಲ್ ಜಲಾಶಯದಿಂದ ಸಂಜೆಯ ವೇಳೆಗೆ ೧೦,೦೦೦ ಕ್ಯೂಸೆಕ್ಸ್ ನೀರು ಘಟಪ್ರಭಾ ನದಿಗೆ ಬರಲಿದೆ. ಅಂದಾಜು ೭೭೦೦೦ ಕ್ಯೂಸೆಕ್ಸ್ ನೀರು ಬರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಘಟಪ್ರಭಾ ನದಿಗೆ ನೀರು ಬರುತ್ತಿರುವುದರಿಂದ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಬಹುತೇಕ ಸೇತುವೆಗಳು ಜಲಾವೃತಗೊಳ್ಳಲಿವೆ. ಈಗಾಗಲೇ ಶಿಂಗಳಾಪೂರ, ಚಿಗಡೊಳ್ಳಿ, ಮೆಳವಂಕಿ, ಉದಗಟ್ಟಿ, ಸುಣಧೋಳಿ, ಢವಳೇಶ್ವರ, ಕಮಲದಿನ್ನಿ-ಹುಣಶ್ಯಾಳ ಪಿವಾಯ್, ಮುನ್ಯಾಳ ಮತ್ತು ಅವರಾದಿ ಸೇತುವೆಗಳು ಜಲಾವೃತಗೊಂಡಿವೆ. ಮಳೆಯ ಅರ್ಭಟ ಹೀಗೆಯೇ ಮುಂದುವರೆದರೆ ಶುಕ್ರವಾರ ತಡರಾತ್ರಿಯವರೆಗೆ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆಯು ಜಲಾವೃತಗೊಳ್ಳುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಈಗಾಗಲೇ ಗೋಕಾಕ ಹಾಗೂ ಮೂಡಲಗಿ ತಹಶೀಲ್ದಾರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಬಾಲಚಂದ್ರ ಜಾರಕಿಹೊಳಿ ಅವರು ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಟೀಂ ಎನ್‌ಎಸ್‌ಎಫ್ ನೇತೃತ್ವದಲ್ಲಿ ತಂಡವೊಂದನ್ನು ರಚಿಸಲಾಗಿದ್ದು, ನಾಗರೀಕರ ಸುರಕ್ಷತಾ ವಲಯಕ್ಕೆ ಆಧ್ಯತೆ ನೀಡಲು ಸೂಚನೆ ನೀಡಲಾಗಿದೆ. ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ಪಿಡಿಓ, ಗ್ರಾಮ ಲೆಕ್ಕಾಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರುಗಳಿಗೆ ನದಿಯ ನೀರಿನ ಪ್ರಮಾಣನುಸಾರ ಮಾಹಿತಿ ಕಲೆ ಹಾಕಿ ನಾಗರೀಕರಿಗೆ ತೊಂದರೆಯಾಗದಂತೆ ಸುರಕ್ಷತಾ ಕ್ರಮಗಳ ಬಗ್ಗೆ ಕರ್ತವ್ಯದಲ್ಲಿ ಪಾಲ್ಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅವಶ್ಯಕತೆ ಬಿದ್ದರೆ ಸಂಪೂರ್ಣ ಜಲಾವೃತಗೊಳ್ಳುವ ಗ್ರಾಮಗಳಲ್ಲಿ ಗಂಜೀ ಕೇಂದ್ರಗಳನ್ನು ತೆರೆಯುವಂತೆಯೂ ತಹಶೀಲ್ದಾರರಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಲೋಳಸೂರ, ಶಿಂಗಳಾಪೂರ, ಅಡಿಬಟ್ಟಿ, ಚಿಗಡೊಳ್ಳಿ, ಮೆಳವಂಕಿ, ಕಲಾರಕೊಪ್ಪ, ಹಡಗಿನಾಳ, ಉದಗಟ್ಟಿ, ತಳಕಟ್ನಾಳ, ತಿಗಡಿ, ಸುಣಧೋಳಿ, ಭೈರನಟ್ಟಿ, ಹುಣಶ್ಯಾಳ ಪಿವಾಯ್, ಬೀಸನಕೊಪ್ಪ, ಢವಳೇಶ್ವರ, ಅರಳಿಮಟ್ಟಿ, ಅವರಾದಿ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಬೀರನಗಡ್ಡಿ, ಹುಣಶ್ಯಾಳ ಪಿಜಿ, ವಡೇರಹಟ್ಟಿ, ಫುಲಗಡ್ಡಿ, ಮಸಗುಪ್ಪಿ, ಬಡಲಕ್ಕನವರ ತೋಟ, ಪಟಗುಂದಿ, ಕಮಲದಿನ್ನಿ, ರಂಗಾಪೂರ, ಮುನ್ಯಾಳ, ಗ್ರಾಮಗಳ ಜನರು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆಯಾ ನದಿತೀರದ ಗ್ರಾಮಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯ ಮಟ್ಟದಲ್ಲಿ ಡಂಗುರ ಸಾರುವಂತೆಯೂ ಸಹ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ