ಗೋಕಾಕ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ತುಂಬಿ ಹರಿಯುತ್ತಿದ್ದು, ಗೋಕಾಕ ಜಲಪಾತ ವೀಕ್ಷಣೆಗೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ.
ಕಳೆದ ಎರಡ್ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ಧುಮ್ಮಿಕ್ಕಿ ಹರಿಯುತ್ತಿದ್ದು, ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ.
ರವಿವಾರ ಹಾಗೂ ಶನಿವಾರ ಗೋಕಾಕ ಜಲಪಾತ ಹಾಗೂ ಜಿಲ್ಲೆಯ ಹಲವು ಪ್ರವಾಸಿ ತಾಣಗಳ ವೀಕ್ಷಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಇನ್ನುಳಿದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರವಾಸಿ ತಾಣಗಳ ವಿಕ್ಷಣೆಗೆ ಆಗಮಿಸುತ್ತಿದ್ದಾರೆ. ಆದರೆ ಮಾಸ್ಕ್ -ಸಾಮಾಜಿಕ ಅಂತರವಿಲ್ಲದೇ ಪ್ರವಾಸಿಗರು ಕೋವಿಡ್ ನಿಯಮ ಉಲ್ಲಂಘಿಸುತ್ತಿದ್ದು, ಪ್ರವಾಸಿ ತಾಣಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ, ಕೋವಿಡ್ ನಿಯಮ ಪಾಲಿಸದವರ ವಿರುದ್ಧ ಕ್ರಮ ವಹಿಸುವಂತೆ ಸ್ಥಳಿಯರು ಆಗ್ರಹಿಸಿದ್ದಾರೆ.
Laxmi News 24×7