Breaking News

ಸಿ.ಎಂ. ಬದಲಾವಣೆ; ಕಾದು ನೋಡಬೇಕಿದೆ: ಶೆಟ್ಟರ್

Spread the love

ಹುಬ್ಬಳ್ಳಿ: ‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಸ್ಪಷ್ಟತೆಯಿಲ್ಲ. ಕಾದು ನೋಡಬೇಕಿದೆ’ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ‌ ನೀಡಿದ್ದಾರೆ. ನನಗೆ ಆ ಕುರಿತು ಯಾವುದೇ ಮಾಹಿತಿ ಇಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಲು ನಾನು ದೆಹಲಿಗೆ ಹೋಗಿಲ್ಲ. ಇಲಾಖೆ ವಿಚಾರಕ್ಕೆ ಸಂಬಂಧಿಸಿ ಗುಜರಾತ್-ದೆಹಲಿ ಭೇಟಿ ಮಾಡಿದ್ದೆ’ ಎಂದು ಸ್ಪಷ್ಟಪಡಿಸಿದರು.

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೊ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ, ‘ಆಡಿಯೊ ಬಗ್ಗೆ ಈಗಾಗಲೇ ನಳಿನ್ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಆಡಿಯೊ ಬಗ್ಗೆ ತನಿಖೆ‌ ಸಹ ನಡೆಯುತ್ತಿದ್ದು, ಆ ಕುರಿತು ಏನೂ ಮಾತನಾಡುವುದಿಲ್ಲ’ ಎಂದು ಶೆಟ್ಟರ್ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ