ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ.
ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ನಿರ್ಧಾರ ವಿರೋಧಿಸಿ ಚಿಂಚೋಳಿಯಲ್ಲಿ ವೀರಶೈವ ಲಿಂಗಾಯತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಈ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಭಾಗವಹಿಸಿದ್ದು, ವಿಶೇಷವಾಗಿತ್ತು.
ಈ ಪ್ರತಿಭಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಬಸವೇಶ್ವರ ಸೇವಾ ಸಮಿತಿ ಆಯೋಜಿಸಿತ್ತು.
ಸಮಾಜದ ಮುಖಂಡರು, ಯಡಿಯೂರಪ್ಪ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಪ್ರತಿಭಟನಾಕಾರರು, ಮುಖ್ಯರಸ್ತೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿದರು.
ಅಲ್ಲದೆ ‘ಅಂದು ವೀರೇಂದ್ರ ಪಾಟೀಲ, ಇಂದು ಯಡಿಯೂರಪ್ಪ’ ಎಂಬ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ‘ವೀರೇಂದ್ರ ಪಾಟೀಲರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ಸಿಗೆ ಆದ ದುಸ್ಥಿತಿಯೇ, ಯಡಿಯೂರಪ್ಪ ಅವರಿಗೆ ಅನ್ಯಾಯ ಮಾಡಿದರೆ ಬಿಜೆಪಿಗೂ ಎದುರಾಗಲಿದೆ’ ಎಂದು ವಾರ್ನಿಂಗ್ ನೀಡಿದರು.