Breaking News

ಖಾಸಗೀ ಶಾಲೆಗಳನ್ನು ಆಗಸ್ಟ್‌ 2 ರಿಂದ ಆರಂಭಿಸಲು ಶಾಲೆಗಳ ಒಕ್ಕೂಟ ಪ್ರಯತ್ನ

Spread the love

ಬೆಂಗಳೂರು: ಕೊರೋನ ಲಾಕ್‌ ಡೌನ್‌ ನಿಂದಾಗಿ ನಿಂತೇ ಹೋಗಿರುವ ಶಾಲೆಗಳನ್ನು ಆರಂಭಿಸಲು ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ. ಸರ್ಕಾರ ಶಾಲೆ ಆರಂಭಿಸದೇ ಹೋದರೆ ಅಗಸ್ಟ್ 2 ರಿಂದ ಖಾಸಗಿ ಶಾಲೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ.

ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಶಾಲೆ ಆರಂಭಕ್ಕೆ ICMC, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಜುಲೈ 30 ರ ಒಳಗೆ ಶಾಲೆ ಆರಂಭ ಮಾಡಬೇಕು. ಇಲ್ಲವಾದಲ್ಲಿ ನಾವೇ ಶಾಲೆ ಆರಂಭಿಸುವುದಕ್ಕೆ ಮುಂದಾಗುತ್ತೇವೆ ಎಂದು ರುಪ್ಸಾ (ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ) ಅಧ್ಯಕ್ಷ ಹಾಲನೂರು ಲೇಪಾಕ್ಷಿ ತಿಳಿಸಿದ್ದಾರೆ. ಗುಜರಾತ್, ತೆಲಂಗಾಣ, ಆಂಧ್ರ, ಒರಿಸ್ಸಾ ಹಾಗೂ ಬೇರೆ ರಾಜ್ಯಗಳಲ್ಲಿ ಶಾಲೆ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಇನ್ನು ಸರ್ಕಾರ ಮಿನಮೇಷ ಎಣಿಸುತ್ತಿದೆ. ಹೀಗಾಗಿ ನಾವು ಕೂಡ ಆಗಸ್ಟ್ 2 ರಿಂದ ಶಾಲೆ ಆರಂಭಿಸುತ್ತೇವೆ ಎಂದು ರುಪ್ಸಾ ಅಧ್ಯಕ್ಷ ಹಾಲನೂರು ಲೇಪಾಕ್ಷಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ಕಾರಣ ಬಂದ್ ಆಗಿದ್ದ ಶಾಲೆಗಳನ್ನು ಪುನಾರಂಭಿಸುವಂತೆ ಸರ್ಕಾರಕ್ಕೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಒತ್ತಾಯಿಸಿದೆ. ಸಂಘಟನೆಯ ರಾಜ್ಯಾಧ್ಯಕ್ಷ ಹಾಲನೂರು ಎಸ್.ಲೇಪಾಕ್ಷಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದ ಶೇ.80 ಬಜೆಟ್ ಶಾಲೆಗಳು, 10 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಾಳೆಯಿಂದ ಆನ್​ಲೈನ್ ಮೂಲಕ ತರಗತಿಗಳು ಶುರುವಾಗುತ್ತಿದೆ. ಇದು ಒಳ್ಳೆಯ ವಿಚಾರ. ಆದರೆ ಶಾಲೆ ಆರಂಭದ ಬಗ್ಗೆ ಸರ್ಕಾರ ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ವಿದ್ಯಾಗಮ ಅಥವಾ ಪಾಳಿ ರೂಪದಲ್ಲಿ ಶಾಲೆ ಆರಂಭಕ್ಕೆ ಒತ್ತಾಯಿಸಿದ ರುಪ್ಸಾ ಸಂಘಟನೆ, ಸರ್ಕಾರಕ್ಕೆ ಒಂದು ವಾರದ ಗಡುವು ನೀಡಿದೆ. ಬೇಡಿಕೆ ಈಡೇರದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ