Breaking News

ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

Spread the love

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರಹ್ಲಾದ್ ಜೋಶಿ ಭೇಟಿಯಾಗಿ ಚರ್ಚೆ ನಡೆಸಿದ್ದರು. ಇದೇ ವೇಳೆ ಸಚಿವ ಜಗದೀಶ್ ಶೆಟ್ಟರ್ ಕೂಡ ಆರ್.ಎಸ್.ಎಸ್.ನಾಯಕರನ್ನು ಭೇಟಿಯಾಗಿದ್ದರು. ಈ ಎಲ್ಲಾ ಬೆಳವಣಿಗಗಳ ನಡುವೆ ಇಂದು ಜೋಶಿ ಆರ್.ಎಸ್.ಎಸ್ ಸಭೆಯಲ್ಲಿ ಭಾಗಿಯಾಗುತ್ತಿದ್ದು, ಇದೀಗ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ