ಬೆಳಗಾವಿ – ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು.
ನಗರದಲ್ಲಿ ಸ್ವಚ್ಛತಾ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ರೋಶಗೊಂಡ ಶಾಸಕ ಅಭಯ ಪಾಟೀಲ ತಾವೇ ಸ್ವತಃ ಟ್ರ್ಯಾಕ್ಟರ್ ನಲ್ಲಿ ಕಸ ತುಂಬಿಕೊಂಡು ಬಂದು ಪಾಲಿಕೆ ಆಯುಕ್ತರ ಮನೆಯ ಮುಂದೆ ಚೆಲ್ಲಿದ್ದರು.
ತಕ್ಷಣ ಸ್ವಚ್ಛತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎಲ್ಲವನ್ನೂ ಸ್ವಚ್ಛಗೊಳಿಸಿದರು.
ಈ ಕುರಿತು ಮಾತನಾಡಿದ ಪಾಲಿಕೆ ಆಯುಕ್ತ ಜಗದೀಶ್, ಈ ಘಟನೆಯನ್ನು ಪಾಸಿಟಿವ್ ಆಗಿ ತೆಗೆದುಕೊಳ್ಳುತ್ತೇವೆ. ಶಾಸಕರು ಜನಪ್ರತಿನಿಧಿಯಾಗಿ ನಮ್ಮ ಗಮನಸೆಳೆದಿದ್ದಾರೆ. ನಮ್ಮ ಸಿಬ್ಬಂದಿ ಕೊರೋನಾ ಮತ್ತು ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಉತ್ತಮ ರೀತಿಯಲ್ಲಿ ನಿರ್ವಹಣೆ ಮಾಡುತ್ತಿದ್ದಾರೆ. ಸ್ವಚ್ಛತಾ ಕಾರ್ಯವನ್ನೂ ಅಷ್ಟೇ ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದು ಸೂಚಿಸುತ್ತೇನೆ ಎಂದು ತಿಳಿಸಿದರು.
ಈ ಘಟನೆಯನ್ನು ಪಾಸಿಟಿವ್ ಆಗಿ ತೆಗೆದುಕೊಂಡು ಸರಿಯಾಗಿ ಕೆಲಸ ನಿರ್ವಹಿಸುವಂತೆ ಎಲ್ಲ ಅಧಿಕಾರಿ, ಸಿಬ್ಬಂದಿಗೆ ಸೂಚಿಸುತ್ತೇನೆ ಎಂದರು.
Laxmi News 24×7