Breaking News

ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು-

Spread the love

ಮುಂಬೈ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಟ ಸಂಜಯ್ ದತ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಸಂಜಯ್ ದತ್ ಅವರನ್ನು ತೀವ್ರನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸಂಜಯ್ ದತ್ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸಂಜಯ್ ದತ್ ಅವರನ್ನು ಆಂಟಿಜಿನ್ ಕಿಟ್ ಬಳಸಿ ಕೊರೊನಾ ಪೆರೀಕ್ಷೆಗೆ ಒಳಪಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಜುಲೈ 29ರಂದು ಸಂಜಯ್ ದತ್ ತಮ್ಮ 61ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಸಂಜಯ್ ದತ್ತ ಬರ್ತ್ ಡೇ ದಿನ ಅಧೀರನ ಲುಕ್ ಬಿಡುಗಡೆ ಮಾಡುವ ಮೂಲಕ ಕೆಜಿಎಫ್ ತಂಡ ಗಿಫ್ಟ್ ನೀಡಿತ್ತು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ