Breaking News

ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಿ : ಉಪ್ಪಾರ ನೌಕರರ ಸಂಘದ ಒತ್ತಾಯ

Spread the love

ಚಿತ್ರದುರ್ಗ : ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮದ ನಮ್ಮ ಉಪ್ಪಾರ ಸಮುದಾಯದ ೧೩ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಉಪ್ಪಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಪ್ಪ ಒತ್ತಾಯಿಸಿದರು.

ಭಾನುವಾರ ಚಿತ್ರದುರ್ಗ ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮಕ್ಕೆ ಭೇಟಿ ನೀಡಿ ಬಾಲಕಿಯನ್ನು ಕಳೆದಕೊಂಡ ಪೋಷಕರಿಗೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು ನಮ್ಮ ಉಪ್ಪಾರ ಸಮುದಾಯದ 13 ವರ್ಷದ ಶಶಿಕಲಾ ಎಂಬ ಅಪ್ರಾಪ್ತ ಬಾಲಕಿ ಬಯಲು ಶೌಚಕ್ಕೆ ತೆರಳಿದ ಸಮಯದಲ್ಲಿ ದುಷ್ಕರ್ಮಿಗಳು ಹಾಡುಹಗಲೇ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಖಂಡನೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸವಂತೆ ಆಗಿದೆ. ಇಂತಹ ಕೃತ್ಯವೆಸಗಿದ ದುಷ್ಕರ್ಮಿಗಳು ಯಾರೇ ಆಗಿದ್ದರೂ ಅವರನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಕಾನೂನು ಅಡಿಯಲ್ಲಿ ಸೂಕ್ತ ಶಿಕ್ಷೆ ನೀಡಬೇಕು. ಆ ಮೂಲಕ ಮಗಳನ್ನು ಕಳೆದುಕೊಂಡ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡಬೇಕು. ಇಲ್ಲವಾದಲ್ಲಿ ಉಗ್ರವಾದ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

Spread the love ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ