Breaking News

ಮುಂದಿನ ಸಿಎಂ ಆಯ್ಕೆಯಲ್ಲಿ ನನ್ನ ಪಾತ್ರ ಇಲ್ಲ- ಯಡಿಯೂರಪ್ಪ

Spread the love

ವಿಧಾನಸೌಧದಲ್ಲಿಂದು ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ಜೊತೆಗೆ ವಿದಾಯಕ್ಕೂ ವೇದಿಕೆಯಾಗಿತ್ತು. ಯಡಿಯೂರಪ್ಪ ಅವರು ತಮ್ಮ ಸರ್ಕಾರ, ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ ಹೋರಾಟದ ಹಾದಿಯನ್ನು ಸ್ಮರಿಸಿ ಭಾವುಕರಾದರು. ಭಾಷಣದ ಕೊನೆಯಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದರು. ಈ ಮೂಲಕ ಕರ್ನಾಟಕದಲ್ಲಿನ ಬಿರುಸಿನ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಚುರುಕುಗೊಳ್ಳುವಂತಾಗಿದೆ. ಮುಂದಿನ ಸಿಎಂ ಯಾರಾಗಬಹುದು? ಯಾರೆಲ್ಲ ಡಿಸಿಎಂ ಸ್ಥಾನಕ್ಕೆ ಲಾಬಿ ನಡೆಸಿದ್ದಾರೆ? ಸಂಪುಟ ರಚನೆ ಹೇಗಿರಲಿದೆ? ಎಂಬುದರ ಬಗ್ಗೆ ಅಪ್ಡೇಟ್ಸ್ ಈ ಪುಟದಲ್ಲಿ ನಿಮಗೆ ಸಿಗಲಿದೆ…

ಸಾಧನಾ ಸಮಾವೇಶದ ನಂತರ ರಾಜಭವನಕ್ಕೆ ತೆರಳಿದ ಸಿಎಂ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ನಾಲ್ಕನೆ ಬಾರಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ, ಮುಂದಿನ ಮುಖ್ಯಮಂತ್ರಿ ಘೊಷಣೆಯಾಗುವವರೆಗೂಗೆ ಹಂಗಾಮಿ ಸಿಎಂ ಆಗಿ ಮುಂದುವರೆಯಲಿದ್ದು, ಬಹುತೇಕ ಸಂಸತ್ ಅಧಿವೇಶನ ಮುಗಿಯುವವರೆಗೆ ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಲಿದ್ದಾರೆ ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ