Breaking News

ಭಾರತದಲ್ಲಿ ಕೊರೊನಾಗೆ 196 ವೈದ್ಯರ ಸಾವು – ಪ್ರಧಾನಿ ಮೋದಿಗೆ ಐಎಂಎ ಪತ್ರ

Spread the love

ನವದೆಹಲಿ: ಕೊರೊನಾ ಸೋಂಕಿನಿಂದ ಈವರೆಗೂ ಭಾರತದಲ್ಲಿ 196 ವೈದ್ಯರು ಪ್ರಾಣ ಕಳೆದುಕೊಂಡಿದ್ದು, ಈ ವಿಚಾರದ ಬಗ್ಗೆ ಗಮನ ಹರಿಸುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಐಎಂಎ ಬರೆದ ಪತ್ರದಲ್ಲಿ ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ವೈದ್ಯರ ಸಾವುಗಳು ಹೆಚ್ಚುತ್ತಿರುವ ಬಗ್ಗೆ ಕಳವಳಗಳ ವ್ಯಕ್ತಪಡಿಸಲಾಗಿದೆ. ಕೊರೊನಾದಿಂದಾಗಿ ವೈದ್ಯರು ಸೋಂಕಿಗೆ ಒಳಗಾಗುವ ಮತ್ತು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚುತ್ತಿವೆ. ಅವರಲ್ಲಿ ಅನೇಕ ಸಾಮಾನ್ಯ ವೈದ್ಯರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.ಐಎಂಎ ದೇಶಾದ್ಯಂತ 3.5 ಲಕ್ಷ ವೈದ್ಯರನ್ನು ಪ್ರತಿನಿಧಿಸುತ್ತದೆ, ಅವರು ಕೈಗೆಟುಕುವ ಆರೋಗ್ಯ ಸೇವೆ ಒದಗಿಸುತ್ತಿದ್ದಾರೆ.

ಇದರಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯದ ನಡುವೆ ವ್ಯತ್ಯಾಸವನ್ನು ತೋರಿಸುವುದಿಲ್ಲ. ಈವರೆಗೂ ಭಾರತದಲ್ಲಿ 196 ವೈದ್ಯರನ್ನು ಕಳೆದುಕೊಂಡಿದ್ದೇವೆ, ವೈದ್ಯರು ಮತ್ತು ಅವರ ಕುಟುಂಬಗಳಿಗೆ ಕೊರೊನಾ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗುತ್ತಿಲ್ಲ ಎಂದು ವರದಿಯಾಗುತ್ತಿದೆ ಚಿಕಿತ್ಸೆಯ ಕೊರತೆಯಿಂದ ವೈದ್ಯರು ಸಾವನ್ನಪ್ಪುತ್ತಿರುವುದು ಕಳವಳಕಾರಿ ಎಂದು ಉಲ್ಲೇಖಿಸಲಾಗಿದೆ.

ಹೀಗಾಗಿ ವಿಶೇಷ ಅಪಾಯದ ಗುಂಪಿನ ವೈದ್ಯರು ಮತ್ತು ಅವರ ಕುಟುಂಬಗಳಿಗೆ ಸಮರ್ಪಕ ಆರೋಗ್ಯ ಸೌಲಭ್ಯಗಳನ್ನು ಒದಗಿಸುವಂತೆ ನೋಡಿಕೊಳ್ಳಬೇಕು, ವೈದ್ಯರ ಜೀವ ಉಳಿಸುವುದರಿಂದ ಸಾವಿರಾರು ಜನರ ಪ್ರಾಣ ಉಳಿಸಬಹುದು ಎಂದು ಐಎಂಎ ಪತ್ರದ ಮೂಲಕ ಮನವಿ ಮಾಡಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ

Spread the loveಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ ನಿರಂತರ ಹಿಮಪಾತವಾಗುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಹಿಮಪಾತ  ಹೆಚ್ಚಾಗಿದ್ದು, ಶ್ರೀನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ