Breaking News

ಕೈಗಾರಿಕೋದ್ಯಮಿಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ- ಶೆಟ್ಟರ್ ಸೂಚನೆ

Spread the love

ನೆಲಮಂಗಲ: ಕೈಗಾರಿಕಾ ಪ್ರದೇಶಗಳಲ್ಲಿ ಕೈಗಾರಿಕೋದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ ಎಂದು ಬೃಹತ್ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ತಿಳಿಸಿದರು.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಡಾಬಸ್‍ಪೇಟೆಯ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಗೆ ಶನಿವಾರ ಭೇಟಿ ನೀಡಿ ಸಚಿವರು ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಿದರು.

ಡಾಬಸ್‍ಪೇಟೆ ಇಂಡಸ್ಟ್ರೀಸ್ ಅಸೋಸಿಯೇಷನ್ ಸದಸ್ಯರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸಚಿವರು, ಕೈಗಾರಿಕೆಗಳಿಗೆ ಭೂಮಿಯನ್ನು ನೀಡುವುದರ ಜೊತೆಯಲ್ಲಿಯೇ ಅಗತ್ಯವಿರುವ ವಿದ್ಯುತ್, ನೀರು, ಸುರಕ್ಷತೆ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವುದು ಮಂಡಳಿಯ ಕರ್ತವ್ಯವಾಗಿದ್ದು, ಆಗ ಮಾತ್ರ ಕೈಗಾರಿಕೆಗಳು ಸುಲಭವಾಗಿ ತಮ್ಮ ಉತ್ಪಾದನೆಯನ್ನು ಪ್ರಾರಂಭಿಸಿ ಸ್ಥಳೀಯರಿಗೆ ಉದ್ಯೋಗಾವಕಾಶ ಹಾಗೂ ರಾಜ್ಯದ ಆರ್ಥಿಕತೆಗೆ ಕೊಡುಗೆಯನ್ನು ನೀಡಲು ಸಾಧ್ಯ. ಈ ನಿಟ್ಟಿನಲ್ಲಿ ಡಾಬಸ್‍ಪೇಟೆಯ ಕೈಗಾರಿಕೋದ್ಯಮಿಗಳು ನೀಡಿರುವ ಬೇಡಿಕೆಗಳನ್ನು ತುರ್ತಾಗಿ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಮಿಯ ಬೇಡಿಕೆ ಹೆಚ್ಚಿರುವುದರಿಂದ, ಮಂಡಳಿಯ ವತಿಯಿಂದ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಅಭಿವೃದ್ಧಿಗೊಳಿಸಿ ಹಂಚಿಕೆಯನ್ನು ಮಾಡುವ ಕಾರ್ಯಕ್ಕೂ ವೇಗಗೊಳಿಸಬೇಕಾಗಿದೆ ಎಂದು ಹೇಳಿದರು.

ತ್ರಿವೇಣಿ ಟ್ರಿಬ್ಯೂನ್ ಮತ್ತು ಕೆಬಿಡಿ ಕಲ್ಪತರು ಕಂಪನಿಗಳಿಗೆ ಭೇಟಿ ನೀಡಿ ಕೋವಿಡ್-19 ಮಹಾಮಾರಿಯನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು. ಸಚಿವರ ಜೊತೆಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಸಿಇಓ ಡಾ.ಶಿವಶಂಕರ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

5, 8,9, 11ನೇ ತರಗತಿ ವಿದ್ಯಾರ್ಥಿಗಳಿಗೆ ಶುಭಸುದ್ದಿ: ಬೋರ್ಡ್‌ ಪರೀಕ್ಷೆ ಇಲ್ಲ!

Spread the love ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ