Breaking News

ಹೆದರಿಸಿ ಯಡಿಯೂರಪ್ಪನವರ ರಾಜೀನಾಮೆ ಪಡೆಯಲಾಗಿದೆ: ಸಿದ್ದರಾಮಯ್ಯ ಟೀಕೆ

Spread the love

ಬೆಳಗಾವಿ: ‘ಬಿಜೆಪಿ ಹೈಕಮಾಂಡ್‌ನವರು ಬಿ.ಎಸ್. ಯಡಿಯೂರಪ್ಪ ಅವರನ್ನು ಹೆದರಿಸಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಸ್ವಇಚ್ಛೆಯಿಂದ ರಾಜೀನಾಮೆ ನೀಡಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

‘ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಪ್ರವಾಹ ಬಂದಾಗ ಸಚಿವ ಸಂಪುಟ ಇರಲಿಲ್ಲ. ಈ ಬಾರಿ ಪ್ರವಾಹ ಬಂದಾಗ ರಾಜ್ಯದಲ್ಲಿ ಮುಖ್ಯಮಂತ್ರಿಯೇ ರಾಜೀನಾಮೆ ನೀಡಿದ್ದಾರೆ. ಯಡಿಯೂರಪ್ಪ ಕೇರ್‌ ಟೇಕರ್‌ ಮುಖ್ಯಮಂತ್ರಿಯಾಗಿದ್ದಾರೆ. ಈಗ ಮಂತ್ರಿಮಂಡಲವೇ ಇಲ್ಲ. ಸ್ವಲ್ಪ ದಿನ ಕಾದು ಬಳಿಕ ರಾಜೀನಾಮೆ ಪಡೆಯಬೇಕಿತ್ತು. ಪ್ರವಾಹದ ಸಂದರ್ಭದಲ್ಲಿ ಕೊಡಿಸಿದ್ದು ಸರಿಯಲ್ಲ’ ಎಂದು ತಿಳಿಸಿದರು.

‘ನೆರೆ ಬಂದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ? ಪ್ರವಾಹವೇ ಬಂದಿಲ್ಲ ಎನ್ನುವ ಸಚಿವರದು ಬೇಜವಾಬ್ದಾರಿ ಹೇಳಿಕೆ. ಹಾಗಿದ್ದರೆ ಮುಖ್ಯಮಂತ್ರಿ ಇಲ್ಲಿಗೇಕೆ ಬಂದಿದ್ದರು. ಶೋಕಿ ಮಾಡಲು ಬಂದಿದ್ದರಾ? ಮುಖ್ಯಮಂತ್ರಿ ಸ್ಥಾನದಿಂದ ಇಳಿಯುತ್ತಿದ್ದೇನೆ ಎನ್ನುವಾಗ ಕಾಟಾಚಾರಕ್ಕೆಂದು ಇಲ್ಲಿ ಪ್ರವಾಸ ಕೈಗೊಂಡಿದ್ದಾರೆ’ ಎಂದು ಆರೋಪಿಸಿದರು.


Spread the love

About Laxminews 24x7

Check Also

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

Spread the loveಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ