Breaking News

ಕಾಲು ಜಾರಿ ನೀರಿಗೆ ಬಿದ್ದು ನಾಲ್ವರು ಮಕ್ಕಳು ಸಾವು

Spread the love

ವಿಶಾಖಪಟ್ಟಣ: ಮಳೆಗೆ ತುಂಬಿ ಹರಿಯುತಿದ್ದ ಹೊಳೆಯೊಳಗೆ ಜಾರಿ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ವಿಶಾಖಪಟ್ಟಣ ಜಿಲ್ಲೆಯ ವಿ. ಮಡುಗುಲಾ ಮಂಡಲ್​ ಜಮ್ಮದೇವಿಪೇಟಾ ಗ್ರಾಮದಲ್ಲಿ ಘಟನೆ ನಡೆದಿದ್ದು ಮೃತ ಮಕ್ಕಳನ್ನು ಜಾಹ್ನವಿ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್​ (7) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಪಾಲಕರು ಬಟ್ಟೆ ಹೊಗೆಯಲು ಹೋಗಿದ್ದರು. ಮಕ್ಕಳು ಸಹ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳದ ಒಳಗೆ ಬಿದ್ದು ನೀರಿನಲ್ಲಿ ಮುಳುಗಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

Spread the loveಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ