Breaking News

ನಂದಿಬೆಟ್ಟದಲ್ಲಿ ಮುಂದುವರಿದ ಲಾಕ್‍ಡೌನ್- ನಿರಾಸೆಯಿಂದ ವಾಪಸ್ಸಾಗ್ತಿರೋ ಪ್ರವಾಸಿಗರು

Spread the love

ಚಿಕ್ಕಬಳ್ಳಾಪುರ: ಕೊರೊನಾ ಹಿನ್ನೆಲೆಯಲ್ಲಿ ಜಗದ್ವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧ ಇನ್ನೂ ಮುಂದುವರಿದಿದೆ. ಹೀಗಾಗಿ ಲಾಕ್‍ಡೌನ್ ಸಡಿಲಿಕೆ ಆಗಿದೆ ಅಂತ ಭಾವಿಸಿ ನಂದಿಗಿರಿಧಾಮಕ್ಕೆ ಬಂದ ಪ್ರವಾಸಿಗರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ವಾಪಸ್ಸಾಗುತ್ತಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರು ಆಗಮಿಸುತ್ತಿದ್ದು, ನಿರಾಸೆಯಿಂದ ವಾಪಸ್ಸುಗುವಂತಾಗಿದೆ. ಅಂದಹಾಗೆ ಲಾಕ್‍ಡೌನ್ ಬಹುತೇಕ ಸಡಿಲಿಕೆ ಆಗಿದ್ದರೂ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ಇನ್ನೂ ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್ ಲತಾ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಮುಂದುವರಿಸಿದ್ದಾರೆ. ಹೀಗಾಗಿ ನಂದಿಗಿರಿಧಾಮಕ್ಕೆ ಬೈಕ್, ಕಾರುಗಳಲ್ಲಿ ಬರ್ತಿರೋ ಪ್ರವಾಸಿಗರು ನಿರಾಸೆಯಿಂದ ವಾಪಾಸ್ಸಾಗುತ್ತಿದ್ದಾರೆ.

ಬೆಟ್ಟದ ತಪ್ಪಲಿನ ಚೆಕ್ ಪೋಸ್ಟ್ ನಲ್ಲೇ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಚೆಕ್ ಪೋಸ್ಟ್ ಬಳಿ ಬ್ಯಾರಿಕೇಡ್ ಹಾಕಿ ವಾಹನಗಳ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ. ಭಾನುವಾರವಾದ ಕಾರಣ ಇಂದು ಎಂದಿನಂತೆ ನಂದಿಗಿರಿಧಾಮದತ್ತ ಪ್ರವಾಸಿಗರು ಆಗಮಿಸಿದ್ದು, ಆದರೆ ಪ್ರವೇಶ ಭಾಗ್ಯ ಇಲ್ಲದೆ ನಿರಾಸೆಯಿಂದ ವಾಪಸ್ಸಾಗುತ್ತಿದ್ದಾರೆ.


Spread the love

About Laxminews 24x7

Check Also

ಪಾಲಿಕೆ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್: ಮಂಗಳವಾರ ಸಚಿವರೊಂದಿಗೆ ಸಭೆ

Spread the love ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾಮೂಹಿಕ ರಜೆ ಪಡೆಯುವ ಮೂಲಕ ಬಿಬಿಎಂಪಿ ಸೇರಿದಂತೆ ಕರ್ನಾಟಕ ರಾಜ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ