Breaking News
Home / Uncategorized / ಇಂದೇ ಹೊಸ ಸಿಎಂ ಆಯ್ಕೆ; ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ

ಇಂದೇ ಹೊಸ ಸಿಎಂ ಆಯ್ಕೆ; ಸಂಜೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ

Spread the love

ಬೆಂಗಳೂರು(ಜು.27): ಬಿಎಸ್​ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆ, ಇಂದು ಹೊಸ ಸಿಎಂ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ವೀಕ್ಷಕರಾಗಿ ಕೇಂದ್ರದಿಂದ ಧರ್ಮೇಂದ್ರ ಪ್ರಧಾನ್​, ಕಿಶನ್ ರೆಡ್ಡಿ, ಅರುಣ್ ಸಿಂಗ್ ಇಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಇಂದು ಸಂಜೆ 7.30ಕ್ಕೆ ನಗರದ ಕ್ಯಾಪಿಟಲ್​ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ತ್ರಿಮೂರ್ತಿಗಳು ಶಾಸಕಾಂಗ ಪಕ್ಷದ ಸಭೆಯ ನೇತೃತ್ವ ವಹಿಸಲಿದ್ದಾರೆ. ಬಹುತೇಕ ಇಂದೇ ಹೊಸ ಸಿಎಂ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆ, ಇಂದು ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ. ಮುಂದಿನ ಸಿಎಂ ಯಾರು ಎಂಬುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗಲಿದೆ. ಶಾಸಕಾಂಗ ಸಭೆ ಹಿನ್ನೆಲೆ ಬಿಜೆಪಿ ಶಾಸಕರಿಗೆ ಬೆಂಗಳೂರಿಗೆ ಬರಲು ಸೂಚನೆ ನೀಡಲಾಗಿದೆ. ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಅರುಣ್ ಸಿಂಗ್ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಶಾಸಕಾಂಗ ಪಕ್ಷದ ಸಭೆ ನಿರ್ವಹಿಸಲು ಕೇಂದ್ರ ಈ ಮೂವರು ವೀಕ್ಷಕರನ್ನು ನಿಯೋಜನೆ ಮಾಡಿದೆ. ಮಧ್ಯಾಹ್ನ 1.15ರ ವೇಳೆಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ ವೇಳೆಗೆ ಧರ್ಮೇಂದ್ರ ಪ್ರಧಾನ್ ಮತ್ತು ಕೇಂದ್ರ ಸಚಿವ ಕಿಶನ್​ ರೆಡ್ಡಿ ಬೆಂಗಳೂರು ತಲುಪಲಿದ್ದಾರೆ.

ಈಗಾಗಲೇ ಅರುಣ್​ ಸಿಂಗ್, ಧರ್ಮೇಂದ್ರ ಪ್ರಧಾನ್, ಡಿ.ಕೆ.ಅರುಣಾ ಅವರ ಹೆಸರಲ್ಲಿ ಜು.27 ಮತ್ತು 28 ನೇ ತಾರೀಖು ಕೆ.ಕೆ.ಗೆಸ್ಟ್ ಹೌಸ್​​ನಲ್ಲಿ ಮೂರು ರೂಮ್ ಬುಕ್ ಆಗಿದೆ.

ಇಂದೇ ಕರ್ನಾಟಕಕ್ಕೆ ಮುಂದಿನ ಸಿಎಂ ಆಯ್ಕೆ ಮಾಡಿ ಎಂದು ಹೈಕಮಾಂಡ್ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ಮತ್ತು ಕಿಶನ್​ ರೆಡ್ಡಿಅವರಿಗೆ ಸೂಚನೆ ನೀಡಿದೆ. ಹೀಗಾಗಿ ಇಂದೇ ಹೊಸ ಸಿಎಂ ಆಯ್ಕೆ ನಡೆಯಲಿದೆ ಎನ್ನಲಾಗುತ್ತಿದೆ. ಶಾಸಕಾಂಗ ಪಕ್ಷದ ಸಭೆಯಲ್ಲೇ ನೂತನ ಸಿಎಂ ಆಯ್ಕೆಯನ್ನು ಮಾಡಲಾಗುತ್ತದೆ. ಹಂಗಾಮಿ ಸಿಎಂ ಬಿಎಸ್​ ಯಡಿಯೂರಪ್ಪನವರೇ ಮುಂದಿನ ಸಿಎಂ ಹೆಸರು ಸೂಚಿಸಲಿದ್ದಾರೆ. ನೂತನ ಸಿಎಂ ಆಯ್ಕೆಗೆ ಯಡಿಯೂರಪ್ಪನವರ ಸಹಮತವಿದೆ ಎಂದು ಬಿಂಬಿಸಲು ಬಿಜೆಪಿ ಪ್ಲಾನ್ ಮಾಡಿದೆ.

ಸಂಭಾವ್ಯರ ಪಟ್ಟಿಯಲ್ಲಿ ಮುರುಗೇಶ್ ಆರ್. ನಿರಾಣಿ, ಸಿ.ಟಿ. ರವಿ, ಬಿ.ಎಲ್​. ಸಂತೋಷ್, ಪ್ರಹ್ಲಾದ್​ ಜೋಶಿ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಕೇಳಿ ಬರುತ್ತಿದೆ.ಇದೇ ವೇಳೆ, ನ್ಯೂಸ್18 ಕನ್ನಡಕ್ಕೆ ಮೂಲಗಳಿಂದ ಬಂದಿರುವ ಮಾಹಿತಿ ಪ್ರಕಾರ ಮುಂದಿನ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ಇಬ್ಬರ ಹೆಸರನ್ನ ಸೂಚಿಸಿದ್ದಾರೆನ್ನಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಮತ್ತು ಆರ್ ಅಶೋಕ್ ಅವರಲ್ಲೊಬ್ಬರನ್ನ ಸಿಎಂ ಮಾಡಿ ಎಂದು ಹೈಕಮಾಂಡ್​ಗೆ ಯಡಿಯೂರಪ್ಪ ಸಲಹೆ ನೀಡಿದ್ದಾರೆಂದು ಮೂಲಗಳು ಹೇಳುತ್ತಿವೆ.

ವೀರಣ್ಣ ಚರಂತಿಮಠ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್, ಬಸವರಾಜ್ ಬೊಮ್ಮಾಯಿ ಮತ್ತು ಬಸನಗೌಡ ಪಾಟೀಲ ಯತ್ನಾಳ್. ಇವರಲ್ಲಿ ವೀರಣ್ಣ ಚರಂತಿಮಠ ಅವರ ಹೆಸರು ಹೊಸದಾಗಿ ಕೇಳಿಬರುತ್ತಿದೆ. ಅಲ್ಲದೇ ಮೊದಲಿನಿಂದಲು ಮುರುಗೇಶ್​ ನಿರಾಣಿ ಹಾಗೂ ಬಸವರಾಜ್​ ಬೊಮ್ಮಾಯಿ ಅವರ ಹೆಸರು ಮುಂಚೂಣಿಯಲ್ಲಿದೆ. ಯಡಿಯೂರಪ್ಪ ಅವರ ಒಲವು ಕೂಡ ಗೃಹ ಸಚಿವ ಬೊಮ್ಮಾಯಿ ಅವರ ಮೇಲೆ ಇದೆ ಎಂದೇ ಹೇಳಬಹುದು. ಪಂಚಮಸಾಲಿಗಳ ಪ್ರಬಲ ನಾಯಕ ನಿರಾಣಿ ಅವರು ಇತ್ತೀಚೆಗೆ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಜೊತೆಗೆ ಬಿಎಸ್​ವೈ ವಿರುದ್ದ ಬಹಿರಂಗವಾಗಿ ಯುದ್ದ ಸಾರಿದ್ದ ಬಸನಗೌಡ ಪಾಟೀಲ ಯತ್ನಾಳ್​, ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕ ಅಲ್ಲದೇ ಒಮ್ಮೆ ಕೇಂದ್ರ ಸಚಿವರಾಗಿದ್ದವರು. ಆದ ಕಾರಣ ಇಷ್ಟು ಜನ ಲಿಂಗಾಯತ ನಾಯಕರು ಸಿಎಂ ರೇಸ್​ನಲ್ಲಿ ಕಾಣಿಸಿಕೊಂಡಿದ್ದು ಹೈಕಮಾಂಡ್​ ಕೃಪೆ ಯಾರಿಗೆ ಒಲಿಯಲಿದೆ ಎನ್ನುವುದು ಮಾತ್ರ ನಿಗೂಢ!


Spread the love

About Laxminews 24x7

Check Also

2 ಸಾವಿರ ರೂ. ಕಳ್ಳತನ ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿ ಪರಿಶೀಲನೆ; ಆತ್ನಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Spread the loveಬಾಗಲಕೋಟೆ, ಮಾರ್ಚ್​.17: 2 ಸಾವಿರ ರೂ. ಕಳ್ಳತನವಾಗಿದೆ ಎಂದು ಶಿಕ್ಷಕಿಯರು ಸಮವಸ್ತ್ರ ಬಿಚ್ಚಿಸಿ ವಿದ್ಯಾರ್ಥಿನಿಯನ್ನು ಪರಿಶೀಲನೆ ನಡೆಸಿದ್ದು ಇದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ