Breaking News

ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ

Spread the love

ಬೆಂಗಳೂರು: ಇನ್ಮುಂದೆ ನಾನು ಸೂಪರ್ ಸಿಎಂ ಅಲ್ಲ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸಿಎಂ ಬದಲಾಗಿದ್ದರಿಂದ ನಾನು ಸೂಪರ್ ಸಿಎಂ ಟ್ಯಾಗ್ ನಿಂದ ಹೊರಗೆ ಬಂದಿರೋದಕ್ಕೆ ಸಂತೋಷವಾಗಿದ್ದೇನೆ. ಮುಂದೆ ಪಕ್ಷದಲ್ಲಿ ಅಥವಾ ಸರ್ಕಾರದೊಳಗೆ ಕೆಲಸ ಮಾಡಬೇಕು ಎಂಬುದನ್ನ ಹೈಕಮಾಂಡ್ ನಿರ್ಧರಿಸಲಿದೆ. 17 ಜನರು ಪಕ್ಷ ಮತ್ತು ಯಡಿಯೂರಪ್ಪನವರನ್ನು ನಂಬಿಕೊಂಡು ಬಂದವರು. ಎಲ್ಲರನ್ನು ಪಕ್ಷ ಒಳ್ಳೆಯ ರೀತಿಯಲ್ಲಿ ನಡೆದುಕೊಳ್ಳುತ್ತೆ ಅನ್ನೋ ವಿಶ್ವಾಸವಿದೆ ಎಂದು ತಿಳಿಸಿದರು.

ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದು ಕೇಂದ್ರದ ನಾಯಕತ್ವ. ಹಾಗಾಗಿ ಎಲ್ಲರ ವಿಶ್ವಾಸ ತೆಗೆದುಕೊಂಡು ಸರ್ವಾನುಮತದಿಂದ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದರು.

ಇದೇ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ವಲಸಿಗರು ಈಗ ನಮ್ಮ ಪಕ್ಷದವರು. ಯಾರಿಗೂ ಅನ್ಯಾಯ ಅಗದಂತೆ ಪಕ್ಷ ನಿರ್ಧಾರ ಮಾಡುತ್ತದೆ. ಯಾರ್ ಮಂತ್ರಿ ಆಗಬೇಕು ಎನ್ನುವುದನ್ನು ಸಿಎಂ ನಿರ್ಧಾರ ಮಾಡುತ್ತಾರೆ. ಸಾಮಾಜಿಕ ನ್ಯಾಯ, ಭೌಗೋಳಿಕ ಎಲ್ಲವನ್ನು ನೋಡಿ ಮಂತ್ರಿ ಸ್ಥಾನ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಸಕ್ರೆಬೈಲು ಆನೆ ಬಾಲಣ್ಣನ ಕಿವಿ ಕತ್ತರಿಸಿದ ವೈದ್ಯರ ತಂಡ: ಚಿಕಿತ್ಸೆ ಕುರಿತು ಡಿಎಫ್ಒ ಹೇಳಿದ್ದಿಷ್ಟು

Spread the love ಶಿವಮೊಗ್ಗ: ಸಕ್ರೆಬೈಲು ಆನೆ‌ ಬಿಡಾರದ ಬಾಲಣ್ಣ ಎಂಬ ಹೆಸರಿನ ಸಾಕಾನೆಯ ಬಲ ಕಿವಿಯನ್ನು ಬೆಂಗಳೂರಿನ ವೈದ್ಯರ ತಂಡವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ