ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ ಆದೇಶ ಮಾಡಿದರೆ ನಾನು ಸಚಿವನಾಗುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಯಡಿಯೂರಪ್ಪ ನಿರ್ಗಮನದ ಬಳಿಕ ಕೆಟ್ಟದಾಗಿ ಮಾತನಾಡಬಾರದು. ಕೆಟ್ಟದಾಗಿ ಮಾತನಾಡುವುದು ಬುದ್ಧಿವಂತರ ಲಕ್ಷಣವಲ್ಲ. ಯಡಿಯೂರಪ್ಪ ಅವರ ಜೀವನ ನೆಮ್ಮದಿ, ಸುಖಕರವಾಗಿರಲಿ ಎಂದರು.