Breaking News

ಶುಭಾಶಯಗಳು ಮಾಮ” : ನೂತನ ಸಿಎಂ ಬೊಮ್ಮಾಯಿ ಗೆ ಅಭಿನಯ ಚಕ್ರವರ್ತಿಯ ಹಾರೈಕೆ

Spread the love

ಬೆಂಗಳೂರು : ರಾಜಭವನದ ಆವರಣದಲ್ಲಿ ಇಂದು(ಬುಧವಾರ, ಜುಲೈ 28) ನಡೆದ ಪ್ರಮಾಣ ವಚನ ಸರಳ ಸಮಾರಂಭ ಕಾರ್ಯಕ್ರಮದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರಿಂದ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಸಿನಿ ಲೋಕದ ತಾರೆ, ಚಂದನವನದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ತಿಳಿಸಿದ್ದಾರೆ.

ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಶುಭಾಶಯ ತಿಳಿಸಿದ ಅಭಿನಯ ಚಕ್ರವರ್ತಿ, “ಸರಳತೆಯಿಂದಲೇ ಅವರು ಬೆಳೆದು ಇಲ್ಲಿಯ ತನಕ ಬಂದಿದ್ದಾರೆ. ನನ್ನ ವೃತ್ತಿ ಜೀವನದ ಆರಂಭದಲ್ಲಿ ನನಗೆ ಬೆನ್ನೆಲುಬಾಗಿ ನಿಂತಿದ್ದರು. ನಿಮಗೆ ಶುಭಾಶಯಗಳು ಮಾಮ” ಎಂದು ಅವರು ಬರೆದುಕೊಂಡಿದ್ದಾರೆ.

ಇನ್ನು, ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನೊಳಗೊಂಡು ಪ್ರಮುಖರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ತಿಳಿಸಿದ್ದಾರೆ.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ