ಬದಲಾಣೆ ಬಡಿದಾಟದಲ್ಲಿ ಗೆದ್ದು, ಸಿಎಂ ಸಿಂಹಾಸನಕ್ಕೇರಿದ ಬಸವರಾಜ್ ಬೊಮ್ಮಾಯಿ ರಾಜ್ಯ ಸುತ್ತೋಕೆ ರೆಡಿಯಾಗಿದ್ದಾರೆ. ರಾಜ್ಯದ ಚುಕ್ಕಾಣಿ ಹಿಡಿದ ಮರುದಿನವೇ ಭೀಕರ ಮಳೆಯಿಂದ ನೆರೆಗೆ ತುತ್ತಾಗಿರೋ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ ಇಂದು ಉತ್ತರಕನ್ನಡ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಮತ್ತೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸಹೋದ್ಯೋಗಿಗಳಾಗೋರು ಯಾರು ಅನ್ನೋ ಚರ್ಚೆ ಮುನ್ನೆಲೆಗೆ ಬಂದಿದೆ. ಇವತ್ತು ಉತ್ತರ ಕನ್ನಡ ಜಿಲ್ಲೆ ಪ್ರವಾಸ ಕೈಗೊಳ್ಳುತ್ತಿರೋ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಹೋಗಲಿದ್ದಾರೆ.
ದೆಹಲಿಗೆ ಹೋಗಿ ಅಲ್ಲಿ ಬಿಜೆಪಿ ವರಿಷ್ಠರನ್ನ ಭೇಟಿಯಾಗಿ ಸಂಪುಟ ರಚನೆ ಬಗ್ಗೆ ಚರ್ಚಿಸಲಿದ್ದಾರೆ. ಬಿಜೆಪಿ ಹೈಕಮಾಂಡ್ ಕೂಡ ಆದಷ್ಟು ಬೇಗ ಸಚಿವ ಸಂಪುಟ ಫೈನಲ್ ಮಾಡಿ ಕೈ ತೊಳೆದುಕೊಳ್ಳಲು ಸಿದ್ಧವಾಗಿದೆ. ಇದರ ನಡುವೆ ಸಚಿವ ಸ್ಥಾನ ಪಡೆಯಲು ಹಲವರು ಪ್ರಯತ್ನ ಮುಂದುವರಿಸಿದ್ದಾರೆ.
Laxmi News 24×7