Breaking News

ಹುಬ್ಬಳ್ಳಿಯಿಂದ ಧಾರವಾಡದ ಕಡೆ ಬರುತ್ತಿದ್ದ ಅಪರಿಚಿತ ಬೈಕ್ ಸವಾರ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ

Spread the love

ಧಾರವಾಡ: ಲಾರಿ ಚಕ್ರದಡಿ ಸಿಲುಕಿ ಅಪರಿಚಿತ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಾಯಗಳಾಗಿರುವ ಘಟನೆ ಧಾರವಾಡದ ನವಲೂರು ಬಡಾವಣೆ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಧಾರವಾಡದ ಕಡೆ ಬರುತ್ತಿದ್ದ ಅಪರಿಚಿತ ಬೈಕ್ ಸವಾರ ಹಾಗೂ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸವಾರ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದ್ದು, ಬೈಕ್ ಸವಾರನ ಜೊತೆಯಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಗಾಯಗೊಂಡ ವ್ಯಕ್ತಿಯನ್ನುಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  ಸದ್ಯ ಧಾರವಾಡ ಟ್ರಾಫಿಕ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.


Spread the love

About Laxminews 24x7

Check Also

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್-ಎಂಎಲ್​ಸಿ ಎಫ್.ಎಚ್.ಜಕ್ಕಪ್ಪನವರ ನಡುವೆ ವಾಗ್ವಾದ

Spread the loveಧಾರವಾಡ : ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ನೇತೃತ್ವದಲ್ಲಿ ಮೂರನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ