Breaking News

ಯಾವ ಖಾತೆ ಕೊಟ್ಟರೂ ಸಹ ಸಮರ್ಥವಾಗಿ ನಿಭಾಯಿಸುತ್ತೇನೆ: ಶಾಸಕ ರೇಣುಕಾಚಾರ್ಯ ಹೇಳಿಕೆ

Spread the love

ಬೆಂಗಳೂರು:ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ರೆ ತಪ್ಪೇನಿಲ್ಲ, ಈಗಲೂ ಯಡಿಯೂರಪ್ಪನವರೇ ನಮ್ಮ ನಾಯಕ ಎಂದು ಎದೆತಟ್ಟಿ ಹೇಳುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು. ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ, ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಆರು ಶಾಸಕರಿದ್ದು, ಜಿಲ್ಲೆಯನ್ನು ಕಡೆಗಣಿಸದಂತೆ ಮನವಿ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಮ್ಮ ಜಿಲ್ಲೆಗೆ ಒಂದು ಸಚಿವ ಸ್ಥಾನ ಕೇಳಿದ್ದೇವೆ. ಮಧ್ಯ ಕರ್ನಾಟಕಕ್ಕೆ ಅವಕಾಶ ಕೊಡಿ ಎಂದು ಅರುಣ್ ಸಿಂಗ್, ಸಿಎಂ ಅವರನ್ನು ಕೇಳಿಕೊಂಡಿದ್ದೇವೆ. ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪೇನಿದೆ ಎಂದು ಬೇಡಿಕೆ ಸಮರ್ಥಿಸಿಕೊಂಡರು. ಯಾವ ಖಾತೆ ಕೊಟ್ಟರೂ ಸಹ ಸಮರ್ಥವಾಗಿ ನಿಭಾಯಿಸುತ್ತೇನೆ, ಆದರೆ ಕೂಸು ಹುಟ್ಟುವುದಕ್ಕೆ ಮುನ್ನಾ ಕುಲಾವಿ ಹೊಲಿಸಿದ್ರು ಎನ್ನುವಂತೆ ಈಗಲೇ ಏನೂ ಹೇಳುವುದಿಲ್ಲ. ಯಾವ ಖಾತೆ ಬೇಕು ಎಂದು ನಾನು ಕೇಳುವುದಿಲ್ಲ, ಸಂಪುಟ ರಚನೆಯಾದ ಬಳಿಕ ಈ ಕುರಿತು ನೋಡೋಣ ಎಂದರು.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ