ಬೆಳಗಾವಿ: ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ತಗ್ಗಿಲ್ಲ. ಪರಿಣಾಮ ಜಿಲ್ಲೆಯ ಕೆಲವು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.
ಕೃಷ್ಣಾ ನದಿ ಪ್ರವಾಹದಿಂದಾಗಿ ಅಥಣಿ ತಾಲೂಕಿನ ಸವದಿ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ್ದ 54 ಜನರನ್ನು ಎಸ್ಡಿಆರ್ಎಫ್ ತಂಡ ರಕ್ಷಣೆ ಮಾಡಿದೆ. ಕಾರ್ಯಾಚರಣೆ ನಡೆಸಿದ ಎಸ್ಡಿಆರ್ಎಫ್ ತಂಡ ನಡುಗಡ್ಡೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ್ದಾರೆ.
#KarnatakaRains UPDATE
28/7/21
🔸Water-logging/flooding
🔸Belagavi area,Karnataka
🔸@NDRFHQ OPS CONTINUE
🔸@10ndrf In action here
🔸At Chikodi Tehsil,Belagavi
🔸Timely Rescue/Evacuation
🔸Helping Citizens@HMOIndia @BhallaAjay26 @PIBHomeAffairs @PIBBengaluru @ANI pic.twitter.com/eXrsIW548G— ѕαtчα prαdhαnसत्य नारायण प्रधान ସତ୍ୟ ପ୍ରଧାନ (@satyaprad1) July 28, 2021