ಬೆಂಗಳೂರು: ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ನೀಡಿದ್ದ ಭರವಸೆಗಳ ಬಗ್ಗೆ ಮತ್ತೆ ನೆನಪಿಸಿರುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಸರ್ಕಾರಕ್ಕೆ ಅಂತಿಮ ಗಡುವಿನ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಶ್ರೀಗಳು, 2ಎ ಮೀಸಲಾತಿಗಾಗಿ ಆಗ್ರಹಿಸಿ ಆಗಸ್ಟ್ 15ರಿಂದ ಸೆ.30ರವರೆಗೆ ರಾಜ್ಯಾದ್ಯಂತ ಅಭಿಯಾನ ನಡೆಸಲಾಗುತ್ತದೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದಿಂದ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದ್ದು, ಪ್ರತಿ ತಾಲೂಕು ಕೇಂದ್ರಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.
ಯಡಿಯೂರಪ್ಪ ನೇತೃತ್ವದಲ್ಲಿನ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಭರವಸೆ ನೀಡಿತ್ತು. ಈಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಆ ಭರವಸೆಗಳನ್ನು ಈಡೇರಿಸಬೇಕು. ಸೆ.15ರೊಳಗೆ ಕೊಟ್ಟ ಮಾತಿನಂತೆ ಮೀಸಲಾತಿ ಘೋಷಿಸದಿದ್ದರೆ ಅಕ್ಟೋಬರ್ 1ರಿಂದ ಸತ್ಯಾಗ್ರಹ ಆರಂಭಿಸುತ್ತೇವೆ. ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Laxmi News 24×7