Breaking News

`ತೆನೆ’ ಇಳಿಸಿ `ಕೈ’ ಹಿಡಿದ ಮಧು ಬಂಗಾರಪ್ಪ..

Spread the love

ಹುಬ್ಬಳ್ಳಿ : ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಕರ್ನಾಟಕ ಕಾಂಗ್ರೆಸ್ ವಿಭಾಗ ಮಟ್ಟದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಮ್ಮುಖದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಬಾವುಟ ಹಿಡಿದರು.

ಅಲ್ಲದೆ ಇದೇ ಸಭೆಯಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಗರ ಜೊತೆ ಸೇರ್ಪಡೆಯಾದರು. ಧಾರವಾಡ, ಹುಬ್ಬಳ್ಳಿಯ ಕೆಲವು ಜೆಡಿಎಸ್ ನಾಯಕರು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಲೋಕಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಮಧುಬಂಗಾರಪ್ಪ ಜೆಡಿಎಸ್ ನಿಂದ ದೂರ ಉಳಿದಿದ್ದರು. ಅಲ್ಲದೆ ಅವರು ಕಾಂಗ್ರೆಸ್ ಸೇರಲಿದ್ದಾರೆ ಅನ್ನೋ ಮಾತುಗಳು ಕೂಡ ಕೇಳಿಬಂದಿದ್ದವು. ಅದಕ್ಕೆ 2021ರ ಮಾರ್ಚ್‍ನಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದರು. ಅಲ್ಲದೆ ಪಕ್ಷ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಆದರೆ ಕೋವಿಡ್ ಪರಿಸ್ಥಿತಿಯ ಕಾರಣದಿಂದಾಗಿ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರಿರಲಿಲ್ಲ.

ಇದೀಗ ಹುಬ್ಬಳ್ಳಿಯ ಗೋಕುಲ್ ಗಾರ್ಡನ್‍ನಲ್ಲಿ ನಡೆದ ಸಮಾರಂಭದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ


Spread the love

About Laxminews 24x7

Check Also

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the loveರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ