Breaking News
Home / ರಾಜಕೀಯ / ಬಿಜೆಪಿ ಹೈಕಮಾಂಡ್ ಎದುರು ಪಂಚಮಸಾಲಿ ಸಮುದಾಯ ಇಟ್ಟ ಹೊಸ ಬೇಡಿಕೆ ಇದು!

ಬಿಜೆಪಿ ಹೈಕಮಾಂಡ್ ಎದುರು ಪಂಚಮಸಾಲಿ ಸಮುದಾಯ ಇಟ್ಟ ಹೊಸ ಬೇಡಿಕೆ ಇದು!

Spread the love

ಬೆಂಗಳೂರು, ಜು. 30: ಈ ಸಲ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ಖಚಿತ ಎಂಬ ಮಾಹಿತಿ ಬಂದಿತ್ತು. ಅದರಂತೆಯೆ ಆರ್‌ಎಸ್‌ಎಸ್‌ ಪ್ರಮುಖರು ಹಾಗೂ ಬಿಜೆಪಿ ಹೈಕಮಾಂಡ್ ಕೂಡ ಲಿಂಗಾಯತ ಪಂಚಮಸಾಲಿ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಲು ತೀರ್ಮಾನಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಹುದ್ದೆ ಆ ಸಮುದಾಯಕ್ಕೆ ಸಿಗಲಿಲ್ಲ ಎಂಬ ನಂಬಿಕೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಖಚಿತ ಮಾಹಿತಿಯಿದೆ.

ಹೀಗಾಗಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಿಕೊಂಡಿರುವ ಲಿಂಗಾಯತ ಪಂಚಮಸಾಲಿ ಸಮುದಾಯ, ಈಗ ಬಿಜೆಪಿ ಹೈಕಮಾಂಡ್ ಎದುರು ಹೊಸ ಬೇಡಿಕೆ ಇಟ್ಟಿದೆ ಎಂಬ ಮಾಹಿತಿ ಬಂದಿದೆ. ಬಿ.ಎಸ್. ಯಡಿಯೂರಪ್ಪ ಅವರ ಪದತ್ಯಾಗದ ಬಳಿಕ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ಪಂಚಮಸಾಲಿ ಸಮುದಾಯ ಭಾರಿ ನಿರೀಕ್ಷೆೆ ಇಟ್ಟುಕೊಂಡಿತ್ತು. ಅದಕ್ಕೆ ಪುಷ್ಟಿಕೊಡುವಂತೆ ಹೈಕಮಾಂಡ್ ಕೂಡ ಸಮುದಾಯದ ಮೂವರಲ್ಲಿ ಒಬ್ಬರಿಗೆ ಸಿಎಂ ಹುದ್ದೆ ಖಚಿತಪಡಿಸಿತ್ತು.

ಆದರೆ ಕೊನೆಯ ಕ್ಷಣದಲ್ಲಿ ಬೆಂಗಳೂರಿನಲ್ಲಿ ನಡೆದ ಬೆಳವಣಿಗೆಗಳಿಂದ ದೊಡ್ಡ ಹುದ್ದೆ ಸಮುದಾಯ ಕೈತಪ್ಪಿದೆ. ಹೀಗಾಗಿ ಅದರ ಬದಲಿಗೆ ಬಿಜೆಪಿ ಹೈಕಮಾಂಡ್ ಎದುರು ಹೊಸ ಬೇಡಿಕೆ ಇಡಲು ಪಂಚಮಸಾಲಿ ಸಮುದಾಯ ಮುಂದಾಗಿದೆ.

ಸರ್ಕಾರಕ್ಕೆ ಶಕ್ತಿ ತೋರಿಸಿದ್ದ ಪಂಚಮಸಾಲಿಗಳು

ಸಂಪುಟ ವಿಸ್ತರಣೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕೆಂದು ಒತ್ತಡ ಹಾಕಲು ಪಂಚಮಸಾಲಿ ಸಮುದಾಯ ತೀರ್ಮಾನ ಮಾಡಿದೆ. 2ಎ ಮೀಸಲಾತಿಗಾಗಿ ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯಂಜಯ ಶ್ರೀಗಳ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದದವರು ಸುಮಾರು 700 ಕಿ. ಮೀ. ಪಾದಯಾತ್ರೆೆ ಮಾಡಿದ್ದರು. ನಂತರ 23 ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆ ಮೂಲಕ ರಾಜ್ಯ ಬಿಜೆಪಿ ಸರ್ಕಾರಕ್ಕೆೆ ಪಂಚಮಸಾಲಿ ಸಮುದಾಯ ತನ್ನ ಶಕ್ತಿ ಹಾಗೂ ಒಗ್ಗಟ್ಟು ತೋರಿಸಿತ್ತು.

ಮೂವರಲ್ಲಿ ಒಬ್ಬರಿಗೆ ಖಚಿತವಾಗಿದ್ದ ಮುಖ್ಯಮಂತ್ರಿ ಹುದ್ದೆ!

 

ಅಲ್ಲದೇ ನಾಯಕತ್ವ ಬದಲಾವಣೆಯ ಸಂದರ್ಭದಲ್ಲಿ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬಹಿರಂಗ ಬಂಡಾಯ ಸಾರಿದ್ದ ಪಂಚಮಸಾಲಿ ಸಮುದಾಯದ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನಕ್ಕೆೆ ಮುಂಚೂಣಿಯಲ್ಲಿ ಕೇಳಿ ಬಂದಿದ್ದವು. ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಯಡಿಯೂರಪ್ಪ ವಿರುದ್ಧ ಬಹಿರಂಗ ಬಂಡಾಯ ತೋರಿಸಿರಲಿಲ್ಲ. ಆದರೆ ಮುಖ್ಯಮಂತ್ರಿ ಹುದ್ದೆಗಾಗಿ ಪ್ರಯತ್ನ ಮಾಡಿದ್ದರು.

ಈ ಹಿನ್ನೆೆಲೆಯಲ್ಲಿ ಮೂವರಲ್ಲಿ ಒಬ್ಬರಿಗೆ ಮುಖ್ಯಮಂತ್ರಿ ಸ್ಥಾನ ಪಕ್ಕಾ ದೊರೆಯುತ್ತದೆ ಎಂಬ ವಿಶ್ವಾಸದಲ್ಲಿ ಪಂಚಮಸಾಲಿ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬಿಜೆಪಿ ಹೈಕಮಾಂಡ್ ಎದುರು ಹೊಸ ಬೇಡಿಕೆ!

 

ಪಂಚಮಸಾಲಿ ಸಮುದಾಯಕ್ಕೆೆ ಮುಖ್ಯಮಂತ್ರಿ ಸ್ಥಾನ ತಪ್ಪಿರುವುದರಿಂದ ತಮ್ಮ ಸಮುದಾಯಕ್ಕೆೆ ಅನ್ಯಾಯ ಮಾಡಿದಂತಾಗಿದೆ. ಆದರಿಂದ ಸಂಪುಟ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆೆ ಸೇರಿದ ಮೂವರು ನಾಯಕರಲ್ಲಿ ಯಾರಿಗಾದರೂ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಡಲೇಬೇಂಬ ಒತ್ತಡವನ್ನು ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್ ಮೇಲೆ ಹೇರಲು ಪಂಚಮಸಾಲಿ ಶ್ರೀಗಳು ಹಾಗೂ ಸಮುದಾಯದ ಮುಖಂಡರು ನಿರ್ಧರಿಸಿದ್ದಾಾರೆ ಎಂದು ತಿಳಿದು ಬಂದಿದೆ.

ಪಂಚಮಸಾಲಿ ಸಮುದಾಯದ ನಾಯಕರಿಗೆ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಕೊಡದಿದ್ದಲ್ಲಿ, ಬಸನಗೌಡ ಪಾಟೀಲ್ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆೆ ಪರಿಗಣಿಸಬೇಕೆಂಬ ಬೇಡಿಕೆಯನ್ನು ಇಡಲು ಸಮುದಾಯದ ಮುಖಂಡರು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ಒತ್ತಡಕ್ಕೆ ಮಣಿದ ಹೈಕಮಾಂಡ್?

 

ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆಯಿಂದ ಖಾಲಿಯಾಗಿದ್ದ ಮುಖ್ಯಮಂತ್ರಿ ಸ್ಥಾನಕ್ಕೆೆ ಹೈಕಮಾಂಡ್ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಅವರ ಹೆಸರು ಸೂಚಿಸಿತ್ತು ಎಂಬ ಮಾಹಿತಿದೆ. ಆದರೆ ವೀಕ್ಷಕರಾಗಿ ಬೆಂಗಳೂರಿಗೆ ಬಂದಿದ್ದ ಕೇಂದ್ರ ಸಚಿವರಾದ ಧರ್ಮೇದ್ರ ಪ್ರಧಾನ್ ಹಾಗೂ ಜಿ. ಕಿಶನ್ ರೆಡ್ಡಿ ಅವರು ಹಂಗಾಮಿ ಸಿಎಂ ಆಗಿದ್ದ ಬಿ.ಎಸ್. ಯಡಿಯೂರಪ್ಪ ಅವರ ಒತ್ತಡಕ್ಕೆೆ ಮಣಿದು ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಅಂತಿಮ ಮಾಡಿದ್ದಾರೆ ಎಂಬ ಅನುಮಾನ ಪಂಚಮಸಾಲಿ ಸಮುದಾಯದ ನಾಯಕರಿಗೆ ಬಂದಿದೆ ಎನ್ನಲಾಗಿದೆ.

ಈ ಬೆಳವಣಿಗೆಯಿಂದ ಪಂಚಮಸಾಲಿ ಸಮುದಾಯ ಬಿಜೆಪಿ ವಿರುದ್ಧ ಅಸಮಾಧಾನಗೊಂಡಿದೆ. ಕೊನೆ ಕ್ಷಣದಲ್ಲಿ ಆಗಿರುವ ಬದಲಾವಣೆಗೆ ನಿಖರ ಕಾರಣ ನೀಡಬೇಕೆಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹೈಕಮಾಂಡ್‌ಗೆ ಆಗ್ರಹಿಸಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ