Breaking News

ಬೆಳಗ್ಗೆ ಕಿಡ್ನ್ಯಾಪ್​ ಆಗಿದ್ದ ಉದ್ಯಮಿಯನ್ನ 5 ಗಂಟೆಯಲ್ಲೇ ರಕ್ಷಣೆ ಮಾಡಿದ ಪೊಲೀಸ್​

Spread the love

ಧಾರವಾಡ: ಜಿಲ್ಲೆಯ ಹಾಡುಗಲೇ ಮೂವರು ದುಷ್ಕರ್ಮಿಗಳು ಉದ್ಯಮಿಯೊಬ್ಬರನ್ನು ಅಪಹರಣವಾದ ಮಾಡಿದ್ದ ಘಟನೆ ನಗರದಲ್ಲಿ ನಡೆದಿದ್ದು, ಘಟನೆ ನಡೆದ ಐದು ಗಂಟೆಯಲ್ಲೇ ಪೊಲೀಸರು ಉದ್ಯಮಿಯನ್ನು ರಕ್ಷಣೆ ಮಾಡಿದ್ದಾರೆ.

ನಗರದ ಬೃಂದಾವನ ಡೆವಲಪರ್ಸ್​​ ಮಾಲೀಕರಾಗಿರುವ ಉದ್ಯಮಿ ಶ್ರಿನಿವಾಸ್ ನಾಯ್ಡು ಅವರನ್ನು ಧಾರವಾಡದ ವಿದ್ಯಾಗಿರಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳು ಬೆಳಗ್ಗೆ 11 ಗಂಟೆ ಸಮಯದಲ್ಲಿ ಕಿಡ್ನಾಪ್​ ಮಾಡಿದ್ದರು. ಕೂಡಲೇ ಅಪಹರಣವಾದ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿ ದೂರು ಕೊಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೊಲೀಸರು ಸಂಜೆ 5 ಗಂಟೆ ವೇಳೆಗೆ ಉದ್ಯಮಿಯನ್ನ ರಕ್ಷಣೆ ಮಾಡಿದ್ದಾರೆ. ತಾಲೂಕಿನ ದೇವರ ಹುಬ್ಬಳ್ಳಿಯಲ್ಲಿ ಉದ್ಯಮಿಯನ್ನು ರಕ್ಷಣೆ ಮಾಡಿದ್ದು, ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮಿಷನರ್ ಲಾಬುರಾಮ್ ಭೇಟಿ ನೀಡಿ ಉದ್ಯಮಿಯಿಂದ ಕಿಡ್ನಾಪರ್​​​ಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ