Breaking News

ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

Spread the love

ನವದೆಹಲಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಬಸವರಾಜ್ ಬೊಮ್ಮಾಯಿ, ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದರು.

ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸಕ್ಕೆ ತೆರಳಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಬಳಿಕ ಸಂಜೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಲಿದ್ದು, ರಾತ್ರಿ ಅಥವಾ ನಾಳೆ ಬೆಳಿಗ್ಗೆ ಜೆ.ಪಿ.ನಡ್ಡಾ ಭೇಟಿಯಾಗಲಿದ್ದಾರೆ.

ಬಿ.ಎಲ್ ಸಂತೋಷ್ ಹಾಗೂ ನಡ್ಡಾ ಭೇಟಿ ವೇಳೆ ಸಚಿವ ಸಂಪುಟ ರಚನೆ ಹಾಗೂ ನೂತನ ಸಚಿವರ ಪಟ್ಟಿ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.

ಇಂದು ಬೆಳಿಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಹಾಗೂ ಗಜೇಂದ್ರ ಸಿಂಗ್ ಶೇಖಾವತ್ ರನ್ನು ಭೇಟಿಯಾಗಿ, ಕೇಂದ್ರ ನಾಯಕರಿಗೆ ಧನ್ಯವಾದ ತಿಳಿಸಿದ್ದರು.


Spread the love

About Laxminews 24x7

Check Also

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಹಾರಾಟ ಕಡಿಮೆ: ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಕ್ರೋಶ

Spread the loveನವದೆಹಲಿ: ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾದ ಬೆಳಗಾವಿ  ನಗರವು ಶಿಕ್ಷಣ, ಉದ್ಯಮ ಹಾಗೂ ರಕ್ಷಣಾ ಕ್ಷೇತ್ರಗಳಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ