ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.
ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ ನೈತಿಕತೆ ಇದೆ ಮಾತನಾಡಲು ಎಂದು ಟಾಂಗ್ ಕೊಟ್ಟಿದ್ದಾರೆ. ನಮ್ಮ ಆಡಳಿತದಲ್ಲಿ ಬಿಜೆಪಿ ಸಿದ್ಧಾಂತದ ಸ್ಟ್ಯಾಂಪ್ ಇರುತ್ತದೆ. ಬಿಜೆಪಿ ಕಾರ್ಯಕ್ರಮಗಳ ಅಡಿಯಲ್ಲಿ ಮಾಡಿರುವ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗುವುದಿಲ್ಲ. ಬಿಜೆಪಿ ಸ್ಟಾಂಪ್ ಆಗಿರುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.
Laxmi News 24×7