Breaking News

ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತ

Spread the love

ಕಲಬುರಗಿ: ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಪಘಾತವಾಗಿರುವ ದಾರುಣ ಘಟನೆ ನಡಿದೆ. ನಿಂತಿದ್ದ ಲಾರಿಯೊಂದಕ್ಕೆ ಗರ್ಭಿಣಿ ಸೇರಿದಂತೆ 7 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ನಸುಕಿನ ಜಾವ ಬಲವಾಗಿ ಗುದ್ದಿದೆ.

ಸಾವಳಗಿ ಬಳಿ ಮುಂಜಾನೆ ಸಂಭವಿಸಿದ ಈ ಭೀಕರ ದುರಂತದಲ್ಲಿ ಕಾರಿನಲ್ಲಿದ್ದ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಮೃತರ ಪೈಕಿ ನಾಲ್ವರು ಮಹಿಳೆಯರು, ಮೂವರು ಪುರುಷರಿದ್ದರು. ಮೃತರೆಲ್ಲರೂ ಕಲಬುರಗಿ ಜಿಲ್ಲೆ ಆಳಂದದವರು ಎಂದು ತಿಳಿದು ಬಂದಿದೆ. ಮೃತರನ್ನು ಇರ್ಫಾನಾ ಬೇಗಂ( 25) ಗರ್ಭಿಣಿ, ರುಚಿಯಾ ಬೇಗಂ(50), ಅಬೇದಾಬಿ ಬೇಗಂ(50), ಮುನೀರ್(28), ಮಹಮ್ಮದ್ ಅಲಿ(38), ಶೌಕತ್ ಅಲಿ(29) ಹಾಗೂ ಜಯಚುನಬಿ( 60) ಎಂದು ಗುರುತಿಸಲಾಗಿದೆ.ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಕಾರ್ ಬಾಗಿಲನ್ನು ಮುರಿದು ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಶವ ಪರೀಕ್ಷೆ ನಂತರ ಸಂಬಂಧಪಟ್ಟವರಿಗೆ ನೀಡಲಾಗುವುದು. ಲಾರಿ ಚಾಲಕ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Spread the loveಕಲಬುರಗಿ: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ  ಶಿವಾಜಿ ಜಯಂತಿ  ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ