ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29), ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್’ನಲ್ಲಿ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಿಸಲಾಗಿತ್ತು.
ಸುನೀಲ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ವೈದ್ಯರು ಸಾಕಷ್ಟು ಪ್ರಯತ್ನಿಸಿದರೂ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.
Laxmi News 24×7