Breaking News

ಅಂಕೋಲಾದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳು ಜಲಾವೃತ

Spread the love

ಕಾರವಾರ, ಜೂನ್ 13: ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ವರುಣನ ಆರ್ಭಟಕ್ಕೆ ನದಿಭಾಗ ಹಾಗೂ ಸಮುದ್ರ ತೀರದಲ್ಲಿನ 40 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.

ಈ ಭಾಗದಲ್ಲಿನ ಮನೆಗಳಲ್ಲಿ ಸುಮಾರು ಆರು ಅಡಿ ನೀರು ಏರುತ್ತಿದ್ದು, ಜನರನ್ನು ನದಿಭಾಗ ಶಾಲೆಗೆ ಸ್ಥಳಾಂತರಿಸಲಾಗಿದೆ. ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆದು, ಆಶ್ರಯ ನೀಡಲಾಗಿದೆ. ಸುಮಾರು 80 ಕ್ಕೂ ಹೆಚ್ಚು ಜನರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ.

ಕದ್ರಾ ಜಲಾಶಯದ ಒಳಹರಿವು ಏರಿಕೆ; ಪ್ರವಾಹದ ಮೊದಲ ಮುನ್ಸೂಚನೆ ಪ್ರಕಟ

ಸ್ಥಳಕ್ಕೆ ಅಂಕೋಲಾ ತಹಶೀಲ್ದಾರ ಉದಯ ಕುಂಬಾರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಸಾವಂತ, ಪಿಎಸ್‌ಐ ಇ.ಸಿ ಸಂಪತ್, ಪಿಡಿಒ ರವೀಂದ್ರ ಬಾಬು, ಪೊಲೀಸ್ ಸಿಬ್ಬಂದಿಗಳಾದ ಪರಮೇಶ್, ಆಸಿಫ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಕೇಂದ್ರ ಸರ್ಕಾರವು ಪ್ರಸಕ್ತ ವರ್ಷಕ್ಕೆ ಅನ್ವಯಿಸುವಂತೆ ಪಶ್ಚಿಮ ಕರಾವಳಿಯ ವಿಶೇಷ ಆರ್ಥಿಕ ವಲಯದಲ್ಲಿ ಜೂನ್ 15ರಿಂದ ಜುಲೈ 31ರ ವರೆಗೆ ಒಟ್ಟು 47 ದಿನಗಳ ಅವಧಿಗೆ ಇಳಿಕೆ ಮಾಡಿ ಮೀನುಗಾರಿಕೆ ನಿಷೇಧ ಅವಧಿಯನ್ನು ಜಾರಿ ಮಾಡಿ ಆದೇಶ ಹೊರಡಿಸಿದೆ ಎಂದು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕರಾದ ಪಿ. ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಎಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ ಅಥವಾ ಔಟ್ ಬೋರ್ಡ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಚಿನ್ನಯ್ಯನಿಗೆ ಎಸ್​ಐಟಿ ಗ್ರಿಲ್: ‘ಬುರುಡೆ’ ಕೊಟ್ಟಿದ್ದೇ ಜಯಂತ್! ಮತ್ತಷ್ಟು ಸ್ಫೋಟಕ ಸಂಗತಿ ಬಹಿರಂಗ

Spread the loveಬೆಂಗಳೂರು, ಸೆಪ್ಟೆಂಬರ್ 1: ಧರ್ಮಸ್ಥಳ (Dharmasthala) ಪ್ರಕರಣದಲ್ಲಿ ‘ಬುರುಡೆ ಗ್ಯಾಂಗ್‌’ನ ಬುರುಡೆಯಾಟ ಬಗೆದಷ್ಟು ಬಯಲಾಗುತ್ತಿದೆ. ಬೆಂಗಳೂರಿನ ಬಾಗಲುಗುಂಟೆ ಜಯಂತ್‌ ಮನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ