Breaking News

ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ

Spread the love

ಸುರಪುರ: ತಾಲೂಕಿನ ಅಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ  ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೃಷ್ಣಾ ನದಿಯಲ್ಲಿ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣದ ಕುರಿತು ಹಿಂದೆ ಬಜೆಟ್‍ನಲ್ಲಿಯೆ ಅನುದಾನ ಘೋಷಿಸಲಾಗಿದೆ.ಅದರಂತೆ ಈಗ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು,ಎರಡು ಮೂರು ಕಡೆಗಳಲ್ಲಿ ಸ್ಥಳ ಗುರುತಿಸಲಾಗುತ್ತಿದೆ. ಸೂಕ್ತ ಸ್ಥಳದಲ್ಲಿ ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಿಸಲಾಗುವುದು ಎಂದು ಸಚಿವ ರಮೇಶ ಜಾರಕಿಹೊಳಿ ಅವರು ತಿಳಿಸಿದರು.

ಶಾಸಕ ನರಸಿಂಹ ನಾಯಕ (ರಾಜುಗೌಡ) ಮಾತನಾಡಿ, ಸುರಪುರ ಜನರ ಕುಡಿಯುವ ನೀರಿನ ಸಮಸ್ಯೆಗೆ ಶಾಸ್ವತ ಪರಿಹಾರಕ್ಕಾಗಿ ಬಹು ದಿನಗಳ ಕನಸಿದೆ. ಅದಕ್ಕಾಗಿ ಮುಖ್ಯಮಂತ್ರಿಗಳಿಗೂ ಮನವರಿಕೆ ಮಾಡಿ ಕಾಮಗಾರಿ ಅನುಮೋದನೆಗೊಳಿಸಲಾಗಿದೆ. ಈಗ ಸ್ಥಳ ಪರಿಶೀಲನೆ ಕಾರ್ಯ ಆರಂಭವಾಗಿದೆ. ಸಚಿವ ರಮೇಶ ಜಾರಕಿಹೊಳೆಯವರು ಹೇಳಿದಂತೆ ಶೀಘ್ರ ಕಾಮಗಾರಿ ನಿರ್ಮಾಣಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.

ಬ್ರೀಜ್ ಕಮ್ ಬ್ಯಾರೇಜ್ ಕುರಿತು ನಿರ್ಮಿಸಲಾದ ನೀಲ ನಕ್ಷೆಯನ್ನು ಸಚಿವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ,ರಾಯಚೂರು ಶಾಸಕ ಶಿವರಾಜ ಪಾಟೀಲ್,ಮಸ್ಕಿಯ ಪ್ರತಾಪಗೌಡ ಪಾಟೀಲ,ಮಾನಪ್ಪ ವಜ್ಜಲ್ ಸೇರಿದಂತೆ ಅನೇಕ ಮುಖಂಡರುಗಳಿದ್ದರು.


Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ