Breaking News
Home / Uncategorized / ಬಾಗಲಕೋಟೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

ಬಾಗಲಕೋಟೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.

Spread the love

ಬಾಗಲಕೋಟೆ : ರಾಜ್ಯಾದ್ಯಂತ ಮಲೆನಾಡು, ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಆದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಇನ್ನೂ ನಿಂತಿಲ್ಲ. ಬಾಗಲಕೋಟೆಯಲ್ಲಿ ನಿನ್ನೆ ರಾತ್ರಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬಾಗಲಕೋಟೆಯ ಬೇಕಮಲದಿನ್ನಿ – ಕರಡಿ, ಹುನಗುಂದ ಸಂಪರ್ಕ ಕಡಿತವಾಗಿದೆ. ಬೇಕಮಲದಿನ್ನಿ ಗ್ರಾಮದಲ್ಲಿ ಹಳ್ಳದ ನೀರು ಸಂಪರ್ಕ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಸಂಚಾರ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಬೇಕಮಲದಿನ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬದಾಮಿ ಪಟ್ಟಣದ ಕಳ್ಳಿಪೇಟೆ ಓಣಿಯೊಳಗೆ ಹೊಂಡದ ನೀರು ಹರಿದುಹೋಗುತ್ತಿದೆ. ನಿರಂತರವಾಗಿ ಮಳೆ ಮುಂದುವರೆದರೆ ಅಗಸ್ತ್ಯ ತೀರ್ಥ ಹೊಂಡಕ್ಕೆ ಹೊಂದಿಕೊಂಡ, ಕೆಳಭಾಗದ ನಿವಾಸಿಗಳಿಗೆ ಆತಂಕ ಎದುರಾಗಲಿದೆ.ಬಾಗಲಕೋಟೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಮನ್ನಿಕಟ್ಟಿ ಗ್ರಾಮದಲ್ಲಿ ಎರಡು ಮನೆಗಳು ಕುಸಿದುಬಿದ್ದಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಈಶಪ್ಪ ಬಡಿಗೇರ ಎಂಬುವವರ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಬಸಮ್ಮ ಹುನಸಿಕಟ್ಟಿ ಮನೆ ಭಾಗಶಃ ಮನೆ ನೆಲಸಮವಾಗಿದೆ.

ಬಾಗಲಕೋಟೆ ಜಿಲ್ಲೆಯ ಬದಾಮಿಯಲ್ಲಿ ನಿನ್ನೆ ತಡರಾತ್ರಿ ನಿರಂತರವಾಗಿ ಮಳೆ ಸುರಿದಿದೆ. ಮಳೆಯಿಂದ ಬೆಟ್ಟದಲ್ಲಿ ಅಕ್ಕ-ತಂಗಿ ಕಿರು ಜಲಪಾತ ಭೋರ್ಗರೆಯುತ್ತಿದೆ. ಅಗಸ್ತ್ಯ ತೀರ್ಥ ಹೊಂಡಕ್ಕೆ ಕಿರು ಜಲಪಾತದ ನೀರು ಬಂದು ಸೇರುತ್ತಿದೆ. ಮೈದುಂಬಿದ ಐತಿಹಾಸಿಕ ಅಗಸ್ತ್ಯ ತೀರ್ಥ ಹೊಂಡ ತುಂಬಿ ಹೆಚ್ಚಾಗಿ ಪಟ್ಟಣದೊಳಗೆ ಹರಿಯುತ್ತಿದೆ.

ನಿರಂತರವಾಗಿ ತಡರಾತ್ರಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ರಸ್ತೆ‌ ಮೇಲೆ ಹಳ್ಳದ ನೀರು ಹರಿಯುತ್ತಿದೆ. ನೀರಿನ ಸೆಳವಿಗೆ ಯುವಕ ರಸ್ತೆಯಲ್ಲಿನ ತಗ್ಗುಗುಂಡಿಗೆ ಬಿದ್ದಿದ್ದಾನೆ. ಗುಂಡಿಯಲ್ಲಿ ಬಿದ್ದ ಯುವಕನನ್ನು ಸ್ನೇಹಿತರು ರಕ್ಷಿಸಿದ್ದಾರೆ. ಹೆರೂರು ಗ್ರಾಮದ ಬಳಿಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಹೆರೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಸ್ತೆ ದಾಟುವ ವೇಳೆ ಚಿನ್ನಾಪುರ ಗ್ರಾಮದ ಸ್ವಾಮಿ ಎಂಬ ಯುವಕ ಗುಂಡಿಗೆ ಬಿದ್ದಿದ್ದ.

ಬಾಗಲಕೋಟೆಯಲ್ಲಿ ಮಾತ್ರವಲ್ಲದೆ ಯಾದಗಿರಿಯಲ್ಲೂ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ರಸ್ತೆಗಳೆಲ್ಲ ಜಲಾವೃತವಾಗಿವೆ. ಅನೇಕ ಮನೆಗಳಿಗೂ ನೀರು ನುಗ್ಗಿದೆ. ಬೀದರ್​ನಲ್ಲಿ ಕೂಡ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಹಾಗೇ, ರಾಯಚೂರು, ವಿಜಯಪುರದಲ್ಲೂ ರಾತ್ರಿಯಿಡೀ ಒಂದೇ ಸಮನೆ ಮಳೆ ಸುರಿದಿದೆ.


Spread the love

About Laxminews 24x7

Check Also

ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ

Spread the love ಗದಗ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ