ಗೋಕಾಕ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ಜೀವದ ಹಂಗು ತೊರೆದು ದುಡಿಯುತ್ತಿರುವವರನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದ್ದಾರೆ.
ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ-ಅಂಗನವಾಡಿ ಕಾರ್ಯಕರ್ತರು, ಪೋಲಿಸರು , ಪೌರ ಕಾರ್ಮಿಕರು ಹಾಗೂ ಮಾಧ್ಯಮ ಮಿತ್ರರಿಗೆ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ತಮ್ಮ ಸೇವೆ ಸಹನೆ ಧೈರ್ಯ ಸಾಹಸಕ್ಕೆ ಬೆಲೆ ಕಟ್ಟಲಾಗದು. ತಮ್ಮನ್ನು ಅಭಿನಂದಿಸುವುದೆ ಮಾನವನ ಪ್ರಥಮ ಕರ್ತವ್ಯ. ತಮ್ಮ ಕುಟುಂಬವನ್ನು ಮರೆತು ಜೀವದ ಹಂಗು ತೊರೆದು ಮಾನವ ಸೇವೆಯಲ್ಲಿ ನಿರತರಾದ ನಿಮಗೆ ಇಡೀ ಜನತೆ ಪರ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.