ಗೋಕಾಕ: ಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.27 ರಿಂದ 7 ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಗುರುವಾರದಿಂದ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ.
ಘಟಪ್ರಭಾ ಎಡದಂಡೆ ಕಾಲುವೆ ಮತ್ತು ಘಟಪ್ರಭಾ ಬಲದಂಡೆ ಕಾಲುವೆಗಳಿಗೆ ತಲಾ 1.50 ಟಿಎಂಸಿ ಹಾಗೂ ಸಿಬಿಸಿ ಕಾಲುವೆಗೆ 0.50 ಟಿಎಂಸಿ ನೀರನ್ನು ಹರಿಸಲಾಗುತ್ತಿದ್ದು, ಮೇ.27 ರಿಂದ ಒಂದು ವಾರದವರೆಗೆ ನೀರು ಬಿಡಲು ಮನವಿ ಮಾಡಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಡಿಸಿಎಂ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಅವರೊಂದಿಗೆ ಮಾತನಾಡಿ ವಿವರಣೆ ನೀಡಿದ್ದೇನೆ. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ತಮ್ಮ ಮನವಿಯ ಮೇರೆಗೆ ಹಿಡಕಲ್ ಜಲಾಶಯದಿಂದ ನೀರನ್ನು ಹರಿಸಲು ಡಿಸಿಎಂ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಬರುವ ಗುರುವಾರದಿಂದ ಹರಿಸಲಾಗುವ ನೀರಿನಿಂದಾಗಿ ಹಿಡಕಲ್ ಜಲಾಶಯದಲ್ಲಿ ಕೇವಲ ಒಂದೇ ಒಂದು ಟಿಎಂಸಿ ನೀರು ಉಳಿಯಲಿದೆ. ಮೇ.27 ರಂದು ಬಿಡಲಾಗುತ್ತಿರುವ ನೀರನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಮುಖ್ಯವಾಗಿ ಮಳೆ ಸುರಿಯಬೇಕು. ಮಳೆಯಾದರೆ ಎಲ್ಲರೂ ಖುಷಿಯಿಂದ ಇರುತ್ತೇವೆ. ಮಳೆಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳೋಣ. ದೇವರ ದಯೆಯಿಂದ ಮಳೆ ಬಿದ್ದರೆ ಕುಡಿಯುವ ನೀರಿನ ಆಹಾಕಾರ ತಪ್ಪಲಿದೆ. ಸಮೃದ್ಧಿ ಬೆಳೆ ಬಂದರೆ ರೈತನ ಮೋಗದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.
Check Also
ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ
Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …