Breaking News
Home / ಜಿಲ್ಲೆ / ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ

Spread the love

ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ.

ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದ್ದಾರೆ

ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನ ವೈರಸ್ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ


Spread the love

About Laxminews 24x7

Check Also

ಲಕ್ಷ್ಮಣ ಸವದಿ ಟಿಕೇಟ್‌ ವಿಷಯದಲ್ಲಿ ಮುನಿಸಿಕೊಂಡಿದ್ದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

Spread the love ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ