Breaking News

ಬೆಂಗಳೂರು-ಬೆಳಗಾವಿ ರೈಲು ವೇಳಾಪಟ್ಟಿ ಬದಲಾವಣೆ

Spread the love

ಬೆಂಗಳೂರು: ಬೆಂಗಳೂರು-ಬೆಳಗಾವಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಲಾಗಿದೆ. ಜೂನ್ 13ರಿಂದಲೇ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.

ವಾರದಲ್ಲಿ ಮೂರು ದಿನ ಬೆಂಗಳೂರು-ಬೆಳಗಾವಿ-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲು ಉಭಯ ನಗರಗಳ ನಡುವೆ ಸಂಚಾರ ನಡೆಸುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ.

ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ರೈಲು ರೈಲು ಸಂಖ್ಯೆ 06598 ಬೆಳಗಾವಿಯಿಂದ ಬೆಳಗ್ಗೆ 8 ಗಂಟೆಗೆ ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಹೊರಡಲಿದೆ. ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಣೆಬೆನ್ನೂರು, ಹರಿಹರ, ದಾವಣಗೆರೆ ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ ಮಾರ್ಗವಾಗಿ ಸಂಚಾರ ಮಾಡಲಿದ್ದು, ಸಂಜೆ 7 ಗಂಟೆಗೆ ಬೆಂಗಳೂರು ತಲುಪಲಿದೆ.


Spread the love

About Laxminews 24x7

Check Also

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲ ಬದಲಾಗಬೇಕು. ಮನೆ ಖಾಲಿ ಮಾಡಬೇಕ:ಸಚಿವ ಸತೀಶ್ ಜಾರಕಿಹೊಳಿ

Spread the loveರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿದೆ. ಬೆಳಗಾವಿ ಅಧಿವೇಶನದ ಬಳಿಕ ಸಂಪುಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ