ಬೆಳಗಾವಿ :ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ, ತೀವ್ರ ಅನಾರೋಗ್ಯದಿಂದ ಗುರುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಶಹಾಪುರ ಆನಂದವಾಡಿಯ 8 ವರ್ಷದ ಬಾಲಕ ಸೋಹಂ ಸುನೀಲ ಬೆನಕೆ ಗುರುವಾರ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2 ತಿಂಗಳ ಹಿಂದೆ ನಾಯಿ ಕಡಿತದಿಂದ ಗಾಯಗೊಂಡಿದ್ದ ಬಾಲಕನಿಗೆ ಅಂದಿನಿಂದಲೇ ಚಿಕಿತ್ಸೆ ಮುಂದುವರಿದಿತ್ತು.
ಆದರೆ ಆತ ಚೇತರಿಸಿಕೊಂಡಿರಲಿಲ್ಲ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರ ಬಾಲಕನನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಬಾಲಕ ಬಿಮ್ಸ್‍ನಲ್ಲಿ ಗುರುವಾರ ಮೃತಪಟ್ಟಿದ್ದಾನೆ.
ಕೊರೋನಾ ಸೋಂಕು ವ್ಯಾಪಿಸುತ್ತಿದೆ. ಇಂಥದರ ನಡುವೆ ನಾಯಿ ಕಡಿತದಿಂದ ಗಾಯಗೊಂಡ ಬಾಲಕ ಸಿವಿಲ್ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದು ಆತಂಕ ಮೂಡಿಸಿದೆ.
Check Also
ಸುವರ್ಣಸೌಧದಲ್ಲಿ ಬಾಪೂಜಿ ಜೀವನ ಚರಿತ್ರೆಯ ಅಪರೂಪದ ಫೋಟೋಗಳ ಪ್ರದರ್ಶನ
Spread the loveಬೆಳಗಾವಿ: ಕುಂದಾನಗರಿ ಈಗ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಸಜ್ಜಾಗುತ್ತಿದೆ. ಇದರ ನಡುವೆ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದಲ್ಲಿ …