Breaking News

ಬೆಳಗಾವಿ ಜಿಲ್ಲೆಯಾದ್ಯಂತ ಲಾಕ್‌ಡೌನ್: ಉತ್ತಮ ಪ್ರತಿಕ್ರಿಯೆ

Spread the love

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಸಂಪೂರ್ಣ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.

ಆಗಾಗ ಬೀಳುತ್ತಿರುವ ಮಳೆ ಕೂಡ ಜನರು ಹೊರಗಡೆ ಓಡಾಡದಂತೆ ತಡೆ ಒಡ್ಡುತ್ತಿದೆ.

ಸಾರಿಗೆ ಬಸ್, ಆಟೊರಿಕ್ಷಾಗಳು ರಸ್ತೆಗಿಳಿಯಲಿಲ್ಲ. ನಗರ ಹಾಗೂ ಕೇಂದ್ರ ಸಾರಿಗೆ ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿವೆ. ರಸ್ತೆಗಳಲ್ಲೂ ಜನ ಹಾಗೂ ವಾಹನ ಸಂಚಾರ ವಿರಳವಾಗಿದೆ. ತುರ್ತು ಕೆಲಸಗಳಿಗೆ ಹೋಗುವವರಿಗೆ ಮಾತ್ರ ಪೊಲೀಸರು ಅವಕಾಶ ಕೊಡುತ್ತಿದ್ದಾರೆ.

 

ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

ಕೋವಿಡ್-19 ಹರಡದಂತೆ ನೋಡಿಕೊಳ್ಳಲು ಜಾರಿಗೊಳಿಸಿರುವ ಲಾಕ್ ಡೌನ್ ಸಾರ್ವಜನಿಕರಿಂದ ಉತ್ಮ ಸ್ಪಂದನೆ ದೊರೆತಿರುವುದರಿಂದ ವಾರಾಂತ್ಯದ ಚಟುವಟಿಕೆಗಳು ಮಂಕಾಗಿವೆ.


Spread the love

About Laxminews 24x7

Check Also

ಚಿಕ್ಕಮುನವಳ್ಳಿ ಹೊರವಲಯದಲ್ಲಿ ಕಳ್ಳಬಟ್ಟಿ ಅಡ್ಡೆ ಮೇಲೆ ನಂದಗಡ ಪೊಲೀಸರ ದಿಢೀರ್ ದಾಳಿ: ಆರೋಪಿ ವಶಕ್ಕೆ

Spread the loveಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಹೊರವಲಯದಲ್ಲಿ ಅಕ್ರಮವಾಗಿ ತಯಾರಿಸಿ ಮಾರಾಟ ಮಾಡಲಾಗುತ್ತಿದ್ದ ಕಳ್ಳಬಟ್ಟಿ ಅಡ್ಡೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ