Breaking News
Home / ಕೊರೊನಾವೈರಸ್ / ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ

ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಹಾಗೂ ಸಿಬ್ಬಂದಿಗೆ ಬೆದರಿಸಿ ಕೊರೋನಾ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶನಿವಾರ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿದ್ದಾರೆ. ಆಗ ವೈದ್ಯರು ಕೊವಿಡ್-19 ನಿಯಮಗಳ ಪ್ರಕಾರ ಗರ್ಭಿಣಿಯನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಿದಾಗ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಈ ಹಿನ್ನೆಲೆ ಗರ್ಭಿಣಿಯನ್ನ ಹೆರಿಗೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರಗೆ ಕರೆದೊಯ್ಯಲು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು. ಆದರೆ ಕುಟುಂಬದ ಸದಸ್ಯರು ಕೊರೋನಾ ಪಾಸಿಟಿವ್ ಇರುವ ವಿಷಯ ತಿಳಿಯುತ್ತಿದ್ದಂತೆ ಗರ್ಭಿಣಿ ಮಹಿಳೆಯನ್ನ ಮನೆಗೆ ಕರೆದುಕೊಂಡು ಹೋಗಿದ್ದಾರೆ.ಅಲ್ಲದೆ ತಮ್ಮ ಮೊಬೈಲ್ ಫೋನ್​ನ್ನು ಕೂಡ ಸ್ವಿಚ್ ಆಫ್​ ಮಾಡಿಕೊಂಡಿದ್ದಾರೆ. ಬಳಿಕ ಆಶಾ ಕಾರ್ಯಕರ್ತೆಯರ ಮೂಲಕ ಗರ್ಭಿಣಿ ಮನೆ ಪತ್ತೆ ಹಚ್ಚಿಸಿ ಹುಡುಕಿದ್ದಾರೆ.ಬಳಿಕ ಗರ್ಭಿಣಿಯನ್ನ ಬೆಳಗಾವಿಗೆ ಕರೆದುಕೊಂಡು ಹೋಗುವಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಾಹನ ತಡೆದು ಧಮ್ಕಿ ಹಾಕಿ, ಆಯಂಬುಲೆನ್ಸ್​​ನ್ನು ಮರಳಿ ನಿಪ್ಪಾಣಿ ಆಸ್ಪತ್ರೆಗೆ ಕರೆತಂದು ಜಿಲ್ಲಾಸ್ಪತ್ರೆಗೆ ಕರೆದೊಯ್ಯದಂತೆ ಆಸ್ಪತ್ರೆ ಎದುರು ಗಲಾಟೆ ನಡೆಸಿದ್ದಾರೆ. ಅಲ್ಲದೆ ಆಸ್ಪತ್ರೆ ಮೇಲೆ ಕಲ್ಲು ತೂರಾಟ ನಡೆಸುವ ಬೆದರಿಕೆ ಹಾಕಿದ್ದಾರೆ.

ಇಷ್ಟೆ ಅಲ್ಲದೇ ನಿಪ್ಪಾಣಿ ಸರಕಾರಿ ಆಸ್ಪತ್ರೆಯ ವೈದ್ಯರಿಗೆ ಆವಾಜ್ ಹಾಕಿ ಆರೋಗ್ಯ ಕೇಂದ್ರದಲ್ಲೇ ಹೆರಿಗೆ ಮಾಡುವಂತೆ ಪಟ್ಟುಹಿಡಿದಿದ್ದಾರೆ. ಗರ್ಭಿಣಿ ಮಹಿಳೆಗೆ ಆಸ್ಪತ್ರೆ ಒಳಗಡೆ ಕರೆದುಕೊಂಡು ಹೋಗಿ ಹೆರಿಗೆ ಮಾಡುವಂತೆ ಮಾಡಿದ್ದಾರೆ. ಇಷ್ಟೆಲ್ಲ ಘಟನೆ ನಡೆದು ಆಸ್ಪತ್ರೆಯ ಮುಂಬಾಗ ಗಲಾಟೆ ನಡೆಸಿದರೂ, ಇದುವರೆಗೂ ಯಾರ ಮೇಲೂ ಪ್ರಕರಣ ದಾಖಲಾಗಿಲ್ಲ.

ಆಸ್ಪತ್ರೆ ಸೀಲ್ ಡೌನ್ಇನ್ನು, ಸೋಂಕಿತ ಗರ್ಭಿಣಿಗೆ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಆಗಿದ್ದರಿಂದ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಸದ್ಯ ಸೋಂಕಿತ ಗರ್ಭಿಣಿಗೆ ಹೆರಿಗೆ ಮಾಡಿಸಿದ್ದರಿಂದ ಆರೋಗ್ಯ ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ಮೂರು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದ್ದು, ಬಾಣಂತಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಈ ಘಟನೆಯಿಂದ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ವಿರುದ್ಧ ಗಲಾಟೆ ಮಾಡಿ ಆವಾಜ್ ಹಾಕಿರುವ ಮಹಿಳೆ ಕುಟುಂಬಸ್ಥರ ವಿರುದ್ಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ. ತಪ್ಪಿತಸ್ಥರ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಆಗ್ರಹಿಸಿದ್ದಾರೆ.

ಬಹುತೇಕ ಖಾಸಗಿ ಆಸ್ಪತ್ರೆಗಳು ತಮ್ಮ ಓಪಿಡಿಗಳನ್ನ ಸರಿಯಾಗಿ ನಿರ್ವಹಿಸುತ್ತಿಲ್ಲ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರಿಗೆ ಆಸರೆಯಾಗಿದ್ದ ಸಮುದಾಯ ಕೇಂದ್ರವನ್ನು ಸದ್ಯ ಲಾಕ್ ಮಾಡಲಾಗಿದ್ದು ರೋಗಿಗಳು ಪರದಾಡುವಂತಾಗಿದೆ. ಕಳೆದ ಎರಡು ದಿನಗಳಿಂದ ಸೀಲ್​ಡೌನ್​ ಮಾಡಲಾಗಿದ್ದು, ನಾಳೆ ಮೇಲಾಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲ್ಲಿನ ತಾಲೂಕು ವೈದ್ಯಾಧಿಕಾರಿ ವಿಠ್ಠಲ ಸಿಂದೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಗೋಕಾಕ: ಮಾರ್ಚ್ 28ರಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ

Spread the loveಗೋಕಾಕ: ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮಹಾಲಕ್ಷ್ಮಿ ಸಭಾಭವನದಲ್ಲಿ ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ