ಬೆಳಗಾವಿ: ರೈತ ವಿರೋಧಿ ನೀತಿಗಳನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಲಾಗಿದ್ದರೂ ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾ ಘಟಕದವರು ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟಿಸಿದರು.
ರೈತರ ಹಿತ ಕಾಯುವುದಕ್ಕೋಸ್ಕರ ನಡೆಯುತ್ತಿರುವ ಹೋರಾಟವನ್ನು ಎಲ್ಲರೂ ಬೆಂಬಲಿಸಬೇಕು ಎಂದು ಕೋರಿದರು.
ಅಂಗಡಿಗಳನ್ನು ಬಂದ್ ಮಾಡುವಂತೆ ಕೋರಿದರು. ಬೆಂಬಲ ಕೊಡುವಂತೆ ಆಟೊರಿಕ್ಷಾ ಚಾಲಕರನ್ನು ಕೋರಿದರು.
‘ಸದ್ಯಕ್ಕೆ ಪೊಲೀಸ್ ಭದ್ರತೆಯಲ್ಲಿ ಬಸ್‌ಗಳ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಯಾವ ಮಾರ್ಗದ ಬಸ್ ಬಹುತೇಕ ತುಂಬುತ್ತದೆಯೋ ಅದನ್ನು ಕಳುಹಿಸಲಾಗುತ್ತಿದೆ’
Laxmi News 24×7