Breaking News

ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ : ಚುನಾವಣೆಗಾಗಿ ಬಿ ಜೆ ಪಿ 2 ಗುಂಪು

Spread the love

ಬೆಳಗಾವಿ: ರಾಜ್ಯ ರಾಜಕಾರಣವನ್ನೇ ಅಲುಗಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಮತ್ತೆ ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ.

ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ರಮೇಶ ಕತ್ತಿ ಮತ್ತೊಮ್ಮೆ ಬ್ಯಾಂಕ್ ಮೇಲೆ ಹಿಡಿತ ಸಾಧಿಸಿ ಅಧ್ಯಕ್ಷರಾಗಲು ಪ್ರಯತ್ನ ನಡೆಸಿದ್ದಾರೆ. ಅವರಿಗೆ ಉಮೇಶ ಕತ್ತಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲವಾಗಿ ನಿಂತಿದ್ದಾರೆ.

ಮತ್ತೊಂದೆಡೆ ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಮಹಾಂತೇಶ ದೊಡ್ಡಗೌಡರ್, ಅಣ್ಣಾ ಸಾಹೇಬ್ ಜೊಲ್ಲೆ ಮಾಜಿ ಶಾಸಕ ಅರವಿಂದ ಪಾಟೀಲ ಮೊದಲಾದವರು ತಮ್ಮ ಗುಂಪಿಗೆ ಪ್ರಾಬಲ್ಯ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಹಾಗಾಗಿ ಬಿಜೆಪಿ ನಾಯಕರಲ್ಲೇ ಎರಡು ಗುಂಪುಗಳಾಗಿದ್ದು, ಭಾರೀ ಪೈಪೋಟಿಗೆ ಡಿಸಿಸಿ ಬ್ಯಾಂಕ್ ಚುನಾವಣೆ ಸಾಕ್ಷಿಯಾಗಲಿದೆ. ಈ ಚುನಾವಣೆ ರಾಜ್ಯ ಸರಕಾರದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.

ದೇಶದಲ್ಲೇ ಅತಿ ದೊಡ್ಡ ಡಿಸಿಸಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ಹಲವುನ ದಶಕಗಳ ಕಾಲ ರಾಜಕೀಯಕ್ಕೆ ಪ್ರವೇಶವಿರಲಿಲ್ಲ. ಬೆಳಗಾವಿಯ ಸುಮಾರು 842 ಕ್ರೆಡಿಟ್ ಕೋ ಆಪರೇಟಿವ್ ಸಂಘಟನೆಗಳು ಇದರಡಿ ಕಾರ್ಯ ನಿರ್ವಹಿಸುತ್ತಿದ್ದವು. ಬ್ಯಾಂಕ್ ಗ ಗಣನೀಯ ಬೆಳವಣಿಗೆ ರಾಜಕಾರಣಿಗಳನ್ನು ಆಕರ್ಷಿಸಿತು.

ಬೆಳಗಾವಿಯ ಇಬ್ಬರು ಪ್ರಬಾವಿ ಸಚಿವರ ಪ್ರತಿಷ್ಠೆಯ ಚುನಾವಣೆ ಇದಾಗಿದೆ, ಕಳೆದ ಬಾರಿ ಲಕ್ಷ್ಮಣ ಸವದಿ ತಂಡದ ವಿರುದ್ಧ ಕೇವಲ ಒಂದೇ ಒಂದು ಮತದ ಅಂತರದಿಂದ ಜಾರಕಿಹೊಳಿ ತಂಡ ಗೆಲುವು ಸಾಧಿಸಿತ್ತು. ರಮೇಶ್ ಕತ್ತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು, ಮತ್ತೆ ಆಯ್ಕೆ ಬಯಸಿರುವ ರಮೇಶ್ ಕತ್ತಿ ತಂಡ 16 ರಲ್ಲಿ 12 ಗೆಲ್ಲುವ ವಿಶ್ವಾಸದಲ್ಲಿದೆ.

 


Spread the love

About Laxminews 24x7

Check Also

ಸೌಕರ್ಯ, ಸಿಬ್ಬಂದಿ: ಕೊರತೆ ಆಸ್ಪತ್ರೆಗೇ ಬೇಕಿದೆ ಚಿಕಿತ್ಸೆ!

Spread the love ಚಿಕ್ಕೋಡಿ: ಪಟ್ಟಣದ ಹೊರವಲಯದಲ್ಲಿ ₹20 ಕೋಟಿ ವೆಚ್ಚದಲ್ಲಿ ಐದು ಎಕರೆಯಲ್ಲಿ ತಲೆ ಎತ್ತಿರುವ ತಾಯಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ