Breaking News

ಸವದತ್ತಿಯ ಸುಕ್ಷೇತ್ರ ಸೇರಿ 3 ದೇವಸ್ಥಾನ ಮತ್ತೊಂದು ತಿಂಗಳು ಬಂದ್

Spread the love

ಬೆಳಗಾವಿ: ಜಿಲ್ಲೆಯ ಸವದತ್ತಿಯ ಸುಕ್ಷೇತ್ರ ರೇಣುಕಾ ಯಲ್ಲಮ್ಮದೇವಿ, ಜೋಗುಳಬಾವಿ ಸತ್ತೆಮ್ಮದೇವಿ ಮತ್ತು ರಾಯಬಾಗ ತಾಲ್ಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ನ.30ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

‘ಈ ದೇವಸ್ಥಾನಗಳಿಗೆ ನೆರೆಯ ಮಹಾರಾಷ್ಟ್ರ ಮೊದಲಾದ ಕಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನು ತಡೆಯಲು, ಕೊರೊನಾ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ದೇವಸ್ಥಾನಗಳ ಆಡಳಿತ ಮಂಡಳಿಯವರು ನಿತ್ಯದ ಧಾರ್ಮಿಕ ವಿಧಿವಿಧಾನಗಳನ್ನು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ನಡೆಸಲು ಷರತ್ತಿಗೆ ಒಳಪಟ್ಟು ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ’ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಮಾಹಿತಿ ನೀಡಿದ್ದಾರೆ.ಕೊರೊನಾ ಕಾರಣದಿಂದಾಗಿ, ಈ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವನ್ನು ಮಾರ್ಚ್‌ 18ರಿಂದ ನಿಷೇಧಿಸಲಾಗಿದೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ