Breaking News

ಹಂದಿಗನೂರು ಗ್ರಾಪಂ. ನೂತನ ಕಟ್ಟಡ ಕಾಮಗಾರಿಗೆ ಚಾಲನೆ

Spread the love

ಬೆಳಗಾವಿ : ಯಮಕನಮರಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಂದಿಗನೂರು ಗ್ರಾಮ ಪಂಚಾಯಿತಿ ನೂತನ ಕಟ್ಟಡ ಕಾಮಗಾರಿಗೆ ಶಾಸಕ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಗೌಡ ಪಾಟೀಲ ಇಂದು ಭೂಮಿ ಪೂಜೆ ನೆರವೇರಿಸಿದರು.

ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಯತ್ನದಿಂದ ರಾಜೀವ ಗಾಂಧಿ ಆವಾಸ್ ಯೋಜನೆಯಡಿ ಬಿಡುಗಡೆಗೊಂಡ 28 ಲಕ್ಷ ರೂ. ಅನುದಾನದಲ್ಲಿ ಮಂಗಳವಾರಕಾಮಗಾರಿಗೆ ಚಾಲನೆ ನೀಡಿದರು. ಇದೇ ವೇಳೆ ಮಾಳೇನಟ್ಟಿ ಗ್ರಾಮದಲ್ಲಿ 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಸ್ಟ್ರೇಟ್ ಲೈಟ್ ಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ತಾಲ್ಲೂಕ ಪಂಚಾಯಿತಿ ಉಪಾಧ್ಯಕ್ಷ ಮಾರುತಿ ಸನದಿ, ಕಾರ್ಯ ನಿರ್ವಾಹಕ ಅಧಿಕಾರಿ ಕಲಾದಗಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇತ್ರಿ, ಕಡೋಲ್ಕರ್ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ

Spread the love ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ ಪ್ರಶಸ್ತಿ ಪ್ರದಾನ ಬೆಳಗಾವಿಯಲ್ಲಿ ಡಾ. ಬೆಟಗೇರಿ ಕೃಷ್ಣಶರ್ಮ ಸಾಹಿತ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ