ಬೆಳಗಾವಿ: ‘2019-20ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಸದೆ ವಾಪಸ್ ಆಗಲು ಕಾರಣರಾದ ಅಧಿಕಾರಿಗಳ ಕುರಿತು ತನಿಖಾ ಸಮಿತಿಯು ವರದಿ ನೀಡಿದೆ. ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕಳುಹಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ. ತಿಳಿಸಿದರು.
ಸಾಮಾನ್ಯ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯ ರಮೇಶ ದೇಶಪಾಂಡೆ, ‘ನಿಗದಿತ ದಿನಕ್ಕಿಂತ ತಡವಾಗಿ ಬಿಲ್ ಸಲ್ಲಿಸಲಾಗಿದೆ. ಜೊತೆಗೆ ತಾಂತ್ರಿಕ ನೆಪವೊಡ್ಡಿ ಬಿಲ್ ಪಾಸ್ ಮಾಡದೆ ಅನುದಾನ ಲ್ಯಾಪ್ಸ್ ಆಗಲು ಕಾರಣರಾದ ಖಜಾನೆ ಇಲಾಖೆ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು. ಇದಕ್ಕೆ ಸದಸ್ಯರು ದನಿಗೂಡಿಸಿದರು.
ಅಧ್ಯಕ್ಷೆ ಆಶಾ ಐಹೊಳೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅರುಣ ಕಟಾಂಬಳೆ ಇದ್ದರು.
Laxmi News 24×7