ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಬೆಳಗಾವಿಯಿಂದ ಇಲಕಲ್ ಗೆ ಹೊರಟ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬಸ್ ನಡುವೆ ಸಿಲುಕಿ ನುಜ್ಜುಗುಜ್ಜಾಗಿದೆ.
ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Laxmi News 24×7