ಬೆಳಗಾವಿ: ಅಂದಾಜು 500 ಕೋಟಿ ರೂಪಾಯಿ ವೆಚ್ಚದಲ್ಲಿ ಕುಂದಾನಗರಿಯಲ್ಲಿ ನಿರ್ಮಾಣವಾಗಿರುವ ಸುವರ್ಣಸೌಧ ಸೂಕ್ತ ನಿರ್ವಹಣೆಯ ಕೊರತೆ ಎದುರಿಸುತ್ತಿದ್ದು, ಬಿಳಿ ಆನೆಯಂತಿದ್ದ ಸೌಧ ಸೂಕ್ತ ನಿರ್ವಹಣೆಯಿಲ್ಲದೆ ಪಾಚಿಗಟ್ಟಿ ಕಪ್ಪುಬಣ್ಣಕ್ಕೆ ತಿರುಗಿದೆ.
ಹೌದು.. ಈ ಬಾರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಸೌಂದರ್ಯ ಕಳೆದುಕೊಂಡ ಸುವರ್ಣಸೌಧ, ಸರಿಯಾಗಿ ನಿರ್ವಹಣೆ ಇಲ್ಲದೇ ಪಾಚಿಗಟ್ಟಿ ಹಸಿರು, ಕಪ್ಪು ಬಣ್ಣಕ್ಕೆ ತಿರುಗಿದೆ. ಪರಿಣಾಮ ಹಳೆ ಕಟ್ಟಡವಾಗಿ ಮಾರ್ಪಾಡಾಗಿದೆ.
ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆಗಾಗಿಯೇ 2.5ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತಿದ್ದರೂ ಸುವರ್ಣಸೌಧ ಕಳೆಗುಂದಿದೆ. ಕಳೆದ ಎರಡು ವರ್ಷಗಳಿಂದ ಚಳಿಗಾಲ ಅಧಿವೇಶನವೂ ನಡೆದಿಲ್ಲ ಮುಂದಿನ ಡಿಸೆಂಬರ್ ನಲ್ಲಿ ಇಲ್ಲಿ ಚಳಿಗಾಲ ಅಧಿವೇಶನಕ್ಕೆ ನಿರ್ಧಾರ ಮಾಡಲಾಗಿದ್ದು ಸುವರ್ಣ ವಿಧಾನಸೌಧ ಸಮರ್ಪಕ ಬಳಕೆ ಆಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ
Laxmi News 24×7