Breaking News

ರೈತರಿಗೆ ಭದ್ರತೆ ನೀಡಲು ಆಗ್ರಹ

Spread the love

ಬೆಳಗಾವಿ: ಉತ್ತರಪ್ರದೇಶದ ಲಿಖಿಂಪುರ್‌ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರ ಬೆಂಗಾವಲು ವಾಹನ ಹರಿಸಿ ನಾಲ್ವರು ರೈತರನ್ನು ಬಲಿ ಪಡೆದ ಆರೋಪಿಯನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ, ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆಯವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು

ಈ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಸಿದಗೌಡ ಮೋದಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಇಂತಹ ಘಟನೆಗಳಿಂದ ಸಾಬೀತಾಗುತ್ತಿದೆ ಎಂದು ದೂರಿದರು.

ಆ ಕೇಂದ್ರ ಸಚಿವರನ್ನು ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾನಿರತ ರೈತರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಹಲ್ಲೆ ನಡೆಯುತ್ತಿದ್ದರೂ, ಪ್ರಾಣ ಹಾನಿ ಆಗುತ್ತಿದ್ದರೂ ಕೇಂದ್ರ ಸರ್ಕಾರವು ಮಧ್ಯಸ್ಥಿಕೆ ವಹಿಸದಿರುವುದು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದಂತಾಗಿದೆ ಎಂದು ದೂರಿದರು.

ಕೇಂದ್ರವು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು. ನ್ಯಾಯಸಮ್ಮತ ಬೇಡಿಕೆ ಈಡೇರಿಕೆಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಭದ್ರತೆ ಒದಗಿಸಬೇಕು’ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ